ಹೃದಯಾಘಾತ: ಚಾಲಕ ಮೃತ್ಯು

ಸುಳ್ಯ, ಜು.೨೦- ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ತಂಗುದಾಣದಲ್ಲಿಯೇ ಮೃತಪಟ್ಟಿರುವ ಘಟನೆ ಮರ್ಕಂಜ ಎಂಬಲ್ಲಿ ನಡೆದಿದೆ.
ಮೃತರನ್ನು ಕೆಎಸ್‌ಆರ್‌ಟಿಸಿಯ ಪುತ್ತೂರು ವಿಭಾಗದಲ್ಲಿ ಕೆಲಸ ಮಾಡುತ್ತಿ ಮಲ್ಲೇಶ್ (56) ಎಂದು ಗುರುತಿಸಲಾಗಿದೆ. ಇವರು ಮರ್ಕಂಜ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯಲು ಹೋದಾಗ ಅವರಿಗೆ ತೀವ್ರವಾದ ಎದೆನೋವಿನೊಂದಿಗೆ ಉಸಿರಾಟದ ತೊಂದರೆಯಾಗಿದ್ದು, ಬಸ್ಸಿನ ಕಂಡಕ್ಟರ್ ಸಿದ್ದಪ್ಪ ಅವರು ಮಲ್ಲೇಶ್ ನನ್ನು ಸಮೀಪದಲ್ಲೇ ನಿಂತಿದ್ದ ಜೀಪಿನಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ದಿದಿದ್ದಾರೆ. ಆದರೆ ಮಲ್ಲೇಶ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.