ಹೃದಯಾಘಾತ: ಬಾಲಕಿ ಮೃತ್ಯು


ಕುಂದಾಪುರ, ಅ.೨೯- ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತಲ್ಲೂರಿನಿಂದ ವರದಿಯಾಗಿದೆ.
ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ (೧೩) ಮೃತಪಟ್ಟ ಬಾಲಕಿ. ಮನೆಯಲ್ಲಿ ಓದುತ್ತಿದ್ದ ವೇಳೆ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಕೊನೆಯುಸಿರೆಳೆದಿದ್ದಾಳೆಂದು ತಿಳಿದುಬಂದಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ  ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ.