ಹೆಚ್ಚಾದ ಸೋಂಕು: ಗ್ರಾಮಸ್ಥರ ಕಳವಳ

ಲಕ್ಷ್ಮೇಶ್ವರ, ಮೇ4: ತಾಲೂಕಿನ ಅಡರಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರದಗಕಟ್ಟಿ ಗ್ರಾಮದಲ್ಲಿ ಕೋರೋನಾ ಸೋಂಕಿನ ಹೆಚ್ಚುತ್ತಿದ್ದು ಗ್ರಾಮಸ್ಥರು ಕಳವಳಗೊಂಡಿದ್ದಾರೆ. ಸೋಮವಾರ ಒಂದೇ ದಿನ 11 ಜನರಿಗೆ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಆಶಾ ಕಾರ್ಯಕರ್ತೆಯರ ಅಂಗನವಾಡಿ ಕಾರ್ಯಕರ್ತರು ಮನೆಯಲ್ಲಿಯೇ ಚಿಕಿತ್ಸೆ ನೀಡಿ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ.
ಆದರೆ ಗ್ರಾಮದಲ್ಲಿ ಎಲ್ಲೆಂದರಲ್ಲಿ ಜನರು ಗುಂಪುಗುಂಪಾಗಿ ಕುಳಿತುಕೊಂಡು ಹರಟೆ ಹೊಡೆಯುತ್ತಿರುವ ದೃಶ್ಯ ಸಾಮಾನ್ಯವಾಗಿದ್ದು ಗ್ರಾಮದ ಹಿರಿಯರು ಹಲವರು ಜನರು ಗುಂಪುಗುಂಪಾಗಿ ಸೇರುತ್ತಿರುವುದನ್ನು ಪ್ರಶ್ನಿಸಿದರೆ ಇಲ್ಲಸಲ್ಲದ ಮಾತುಗಳನ್ನಾಡಿ ಕಾಲಹರಣ ಮಾಡುತ್ತಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಮತ್ತಷ್ಟು ಸೋಂಕಿನ ಭೀತಿ ಎದುರಾಗಿದ್ದು ಮಾಸ್ಕ್ ಧರಿಸದೆ ಕುಳಿತು ಕೊಳ್ಳುತ್ತಿರುವುದು ಸೋಂಕು ಹರಡಲು ಕಾರಣವಾಗುತ್ತಿದ್ದು ಪೆÇಲೀಸ್ ಮತ್ತು ಕಂದಾಯ ಇಲಾಖೆಯವರು ಗ್ರಾಮದಲ್ಲಿ ಬಿಗಿ ಕ್ರಮ ಕೈಗೊಳ್ಳದಿದ್ದರೆ ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡುವ ಸ್ಥಿತಿ ಎದುರಾಗಲಿದೆ.
ಎಂಬ ಆತಂಕವನ್ನು ವ್ಯಕ್ತಪಡಿಸಿದರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಸವಿತಾ ಸೋಮಣ್ಣನವರ ಗ್ರಾಮಕ್ಕೆ ಭೇಟಿ ನೀಡಿ ಮನೆಗಳಿಗೆ ತೆರಳಿ ಸೋಂಕಿನ ಲಕ್ಷಣ ಉಳ್ಳವರು ಸಂಬಂಧಪಟ್ಟ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತರನ್ನು ಭೇಟಿ ಆಗುವಂತೆ ಸೂಚಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿನ್ನೆ ಗ್ರಾಮದಲ್ಲಿ ಬಿಡಾರ ಹೂಡಿ ಗಂಟಲು ದೃವ ಪರೀಕ್ಷೆ ನಡೆಸಿದರು.