ಹೆಚ್‌ಡಿಕೆಗೆ ಕೊರೊನಾ

ಬೆಂಗಳೂರು, ಏ. ೧೭- ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಕೊರೊನಾ ಸೊಂಕು ದೃಢಪಟ್ಟಿದೆ.
ಕೊರೊನಾ ಸೋಂಕು ದೃಢಪಟ್ಟಿರುವ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ನನಗೆ ಕೊರೊನಾ ಸೋಂಕು ದೃಢಟಪಟ್ಟಿದೆ. ಕಳೆದ ಹಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ, ಮನವಿ ಮಾಡಿದ್ದಾರೆ.
ನಿನ್ನೆಯಷ್ಟೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಬಸವ ಕಲ್ಯಾಣದಲ್ಲಿ ವಿಧಾನಸಭೆಯ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆ ತಮ್ಮ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಹೆಚ್ಚು ಜನರ ಸಂಪರ್ಕದಲ್ಲಿದ್ದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.