ಹೆಚ್‌ಡಿಡಿ ದಂಪತಿಗೆ ಕೊರೊನಾ

ಬೆಂಗಳೂರು,ಮಾ.೩೧- ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್-೧೯ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ತಾವು ಮತ್ತು ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ಪಾಸಿಟೀವ್ ವರದಿ ಬಂದಿದೆ. ಹೀಗಾಗಿ ಸ್ವಯಂ ಐಸೋಲೇಷನ್ ಆಗುತ್ತಿದ್ದೇವೆ ಎಂದು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ತಮ್ಮ ಸಂಪರ್ಕದಲ್ಲಿದ್ದವರು ಸ್ವಯಂ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ದೇವೇಗೌಡರು ಮನವಿ ಮಾಡಿದ್ದಾರೆ. ತಮಗೆ ಸೋಂಕು ತಗುಲಿರುವುದರಿಂದ ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳು ಭಯಪಡುವ ಅಗತ್ಯವಿಲ್ಲ ಎಂದು ಅವರು ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.