ಹೆಚ್ ಎಸ್ ಕೆ ಪಾಲಿಟೆಕ್ನಿಕ್ ನಲ್ಲಿ 5 ದಿನದ ಉದ್ಯೋಗ ತರಬೇತಿ ಕಾರ್ಯಾಗಾರ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜು.28:  ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಸಂಸ್ಥೆಯ ಸಹಯೋಗದಲ್ಲಿ ನಗರದ ಪ್ರತಿಷ್ಠಿತ ಹೆಚ್ ಎಸ್ ಕೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿವಿಧ ವಿಭಾಗಗಳ ಮೊದಲನೇ ವರ್ಷದ ತಾಂತ್ರಿಕ ವಿದ್ಯಾರ್ಥಿಗಳಿಗೆ ಐದು ದಿನಗಳ ಉದ್ಯೋಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತರಬೇತಿಯನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ಕೊಡಲಾಗುವುದೆಂದು ಸಂಸ್ಥೆಯ ಅಧ್ಯಕ್ಷ  ಹೆಚ್. ಎಂ. ಕಿರಣ್ ಕುಮಾರ್ ಹೇಳಿದ್ದಾರೆ.
ಹೆಚ್ ಎಸ್ ಕೆ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಹಲವು ರೀತಿಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳನ್ನ ಉದ್ಯಮಿಗಳು ಬಯಸುವಂತೆ  ಕೌಶಲ್ಯ ಭರಿತರಾಗಿ ತಯಾರು ಮಾಡುವ ಜವಾಬ್ದಾರಿಯನ್ನು ಹೊತ್ತಿದೆ ಎಂದು  ಕಾಲೇಜಿನ ಪ್ರಾಂಶುಪಾಲ ಡಾ ಟಿ. ಎಂ. ವೀರಗಂಗಾಧರ ಸ್ವಾಮಿ ಹೇಳಿದ್ದಾರೆ.  
ಬೆಂಗಳೂರಿನಿಂದ ತರಬೇತಿದಾರರಾಗಿ ರವಿಕುಮಾರ್,  ದಾಮೋದರ ಮತ್ತು ಧ್ರುವ ಬಿನಾನಿ ಆಗಮಿಸಿದ್ದರು.  ಇಪ್ಪತ್ತು ವರ್ಷಕ್ಕೂ ಹೆಚ್ಚು ಅನುಭವವುಳ್ಳ ಇವರುಗಳು ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಬಲಗೊಳಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ.
ಕಾರ್ಯಕ್ರಮದಲ್ಲಿ ಕಾಲೇಜಿನ  ತೇಜಸ್ವಿ ಕಟ್ಟಿಮನಿ ಟಿ ಆರ್, ವಿವಿಧ ವಿಭಾಗಗಳ ಅಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.