
ಕೆ.ಆರ್.ಪೇಟೆ.ಏ.04:- ಮೇ10ರ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಹೆಚ್.ಟಿ.ಮಂಜುರವರನ್ನು 30000 ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದರು.
ಅವರು ಪಟ್ಟಣದ ಮಾರಮ್ಮದೇವಾಲಯದ ಆವರಣದಲ್ಲಿ ಅನ್ಯಪಕ್ಷಗಳ ಮುಖಂಡರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು. ತಾಲ್ಲೂಕಿನ ಜನತೆ ಇದೇ ಮೇ18 ರಂದು ಜೆಡಿಎಸ್ ವರಿಷ್ಟ ಹೆಚ್.ಡಿ.ದೇವೇಗೌಡರ ಜನ್ಮದಿನ ಇದ್ದು ಮೇ 13ಕ್ಕೆ ಚುನಾವಣಾ ಫಲಿತಾಂಶ ಬರಲಿದೆ ನಿಮ್ಮ ತಾಲ್ಲೂಕು ಸೇರಿದಂತೆ ಜಿಲ್ಲೆಯ ಎಲ್ಲಾ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ದೇವೇಗೌಡರ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ನೀಡಬೇಕು ಈ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಿ ಕೆಲಸ ಮಾಡಬೇಕು ಎಂದರು.
ನೇರಾನೇರಾ ರಾಜಕಾರಣ ಮಾಡುವವರನ್ನು ಒಪ್ಪಿಕೊಳ್ಳಬಹುದು ಆದರೆ ಮಂಡ್ಯ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕುತಂತ್ರದ ರಾಜಕಾರಣ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಮ್ಮವರೇ ನಮ್ಮನ್ನು ಸೋಲಿಸಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮೈಮರೆಯಬೇಡಿ ನಮ್ಮ ಜೆಡಿಎಸ್ ಕಾರ್ಯಕರ್ತರು ಕುತಂತ್ರದ ರಾಜಕಾರಣಕ್ಕೆ ಆಸ್ಪದ ನೀಡಬಾರದು.
ಜಾತಿಯ ವ್ಯಾಮೋಹಕ್ಕೆ ಒಳಗಾಗದೇ ನನ್ನ ಮೇಲೆ ನಂಬಿಕೆ ಇಟ್ಟು ನನ್ನ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ನಿಮ್ಮ ನಂಬಿಕೆ ಹುಸಿಯಾಗದಂತೆ ನೋಡಿಕೊಳ್ಳುತ್ತೇನೆ
ನಾನು ಈಗಾಗಲೇ 100 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದು ಅಲ್ಲಿನ ಸಂಪೂರ್ಣ ಚಿತ್ರಣ ನನಗಿದ್ದು ಎರಡು ರಾಷ್ಟ್ರೀಯ ಪಕ್ಷಗಳಿಗಿಂತ 10-15 ಸೀಟುಗಳನ್ನು ಹೆಚ್ಚಾಗಿ ತೆಗೆದುಕೊಳ್ಳುತ್ತೇನೆ. ಈ ಬಾರಿ ಸ್ವತಂತ್ರ ಸರ್ಕಾರ ತರಲು ಶ್ರಮಿಸುತ್ತಿದ್ದೇನೆ ಎಂದರು.
ನನಗೆ ಗೊತ್ತಿರುವುದು ದೇವೇಗೌಡರ ಮನೆ ಮಾತ್ರ. ಜೆಡಿಎಸ್ ಪಕ್ಷವನ್ನು ಹೊರತು ಪಡಿಸಿ ಬೇರೆ ಪಕ್ಷದ ಚಿಹ್ನೆ ನನಗೆ ಗೊತ್ತಿಲ್ಲ. ನನ್ನ ರಾಜಕೀಯ ಆರಂಭ ಜೆಡಿಎಸ್ ಪಕ್ಷದಿಂದ ಆಗಿದೆ. ಅಂತ್ಯವೂ ಇದೇ ಪಕ್ಷದಲ್ಲಿ ಆಗಲಿದೆ. ನಾನು ಪಕ್ಷಾಂತರಿಯಲ್ಲ. ನನಗೆ ಒಳಗೊಂದು ಹೊರಗೊಂದು ನೀತಿಯಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದ ಜೆಡಿಎಸ್ ಪಕ್ಷದಲ್ಲಿ ಕೆಲಸ ಮಾಡುವುದು ಒಂದು ಪುಣ್ಯದ ಕೆಲಸ. ಸಚಿವ ನಾರಾಯಣಗೌಡ ಆ ಪುಣ್ಯವನ್ನು ಕಳೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಹೆಚ್.ಟಿ.ಮಂಜುಗೆ ಆ ಪುಣ್ಯ ಒದಗಿ ಬಂದಿದೆ ಎಂದು ಪಾಂಡವಪುರ ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದರು.
ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಎಲ್ಲಾ ಗ್ರಾಮಗಳಿಗೂ ಪಂಚರತ್ನ ಕಾರ್ಯಕ್ರಮದ ಉದ್ದೇಶಗಳನ್ನು ತಿಳಿಸಲಾಗಿದೆ ಎಂದು ಜೆಡಿಎಸ್ ಅಭ್ಯರ್ಥಿ ಎಚ್.ಟು.ಮಂಜು ತಿಳಿಸಿದರು.
ಇದೆ ಸಂದರ್ಭದಲ್ಲಿ ಅನ್ಯ ಪಕ್ಷದ ಪುರಸಭಾ ಸದಸ್ಯರಾದ ಗಿರೀಶ್, ಇಂದ್ರಾಣಿ ವಿಶ್ವನಾಥ್, ಮಾಜಿ ಸದಸ್ಯರಾದ ಕೆ.ಆರ್.ಹೇಮಂತ್‍ಕುಮಾರ್, ಕೆ.ಆರ್.ಪುಟ್ಟಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಎಸ್.ರಾಮೇಗೌಡ ಸೇರಿದಂತೆ ಪಟ್ಟಣ ಹಲವರು ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಮು, ಮನ್‍ಮುಲ್ ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್,ರಾಜ್ಯ ಜೆಡಿಎಸ್ ವಕ್ತಾರ ಅಶ್ವಿನ್ ಕುಮಾರ್,ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ಕೃಷ್ಣೇಗೌಡ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.