ಹೆಜ್ಜೇನು ಕಚ್ಚಿ ವ್ಯಕ್ತಿ ಸಾವು

ಶಿವಮೊಗ್ಗ, ಡಿ. 28: ಹೆಜ್ಜೇನುಗಳ ದಾಳಿಯಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪದ ಸಿಂಗನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಭವಿಸಿದೆ.ಕೀಗಡಿ ಜಯರಾಮ ಗೌಡರ ಪುತ್ರ ಅಖಿಲೇಶ್ (39) ಹೆಜ್ಜೇನು ಕಚ್ಚಿ ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿದ್ದ ಅಖಿಲೇಶ್ ಕರೋನಾ ಹಿನ್ನೆಲೆ ಊರಿಗೆ ಮರಳಿದ್ದರು. ಭಾನುವಾರ ತೋಟದಲ್ಲಿ ಕೊನೆ ತೆಗೆಯುವ ವೇಳೆ ಹೆಜ್ಜೇನು ದಾಳಿಗೆ ತುತ್ತಾಗಿದ್ದಾರೆ.
 ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ  ಕರೆತರುವ ಮಾರ್ಗಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.