ಹೆಣ್ಣುಮಕ್ಕಳು ತಮ್ಮ ಶಕ್ತಿ ಸಾಮರ್ಥ್ಯಗಳ ಬಲದಿಂದ ಬದುಕಬೇಕು

 ಚಿತ್ರದುರ್ಗ. ಡಿ.೧: ಹೆಣ್ಣು ಮಕ್ಕಳೆಲ್ಲ ಶಿಕ್ಷಿತರಾದಾಗ ಮಾತ್ರ, ಸಂವಿಧಾನದ ಕಲ್ಪನೆಯ ಭಾರತವನ್ನು ನಾವು ತಲುಪಲು ಸಾದ್ಯ. ಶಿಕ್ಷಣ ಪಡೆದಂತಹ ಹೆಣ್ಣು ಸ್ವಾವಲಂಬಿಯಾಗಬೇಕು ಆರ್ಥಿಕವಾಗಿ ಸಬಲರಾಗಿರಬೇಕು ಇನ್ನೊಬ್ಬರಿಂದ ಶೋಷಿತವಾಗಲು ಅವಕಾಶ ನೀಡಬಾರದು ಎಂದು ರೋರ‍್ಯಾಕ್ಟ್ ಸುಮನ್‌ರವರು ನುಡಿದರು. ಅವರು ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್, ರೋರ‍್ಯಾಕ್ಟ್ ಮತ್ತು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಸಹಯೋಗದೊಂದಿಗೆ ”ಮಹಿಳೆಯರ ಸಬಲೀಕರಣ” ಎಂಬ ವಿಚಾರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ರೋರ‍್ಯಾಕ್ಟ್ ಪಾಲಾಕ್ಷ ಮಾತನಾಡುತ್ತಾ ಹೆಣ್ಣಿನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ 
ಭ್ರೂಣ ಹತ್ಯೆ, ಅನಕ್ಷರತೆ, ಕಿರುಕುಳ, ತಾರತಮ್ಯ, ಅವಮಾನ, ಅಗೌರವ, ಅತ್ಯಾಚಾರಮೊದಲಾದ ಅನ್ಯಾಯಗಳು ಹತೋಟಿಗೆ ಬರಬೇಕಾದರೆ, ಅವಳಿಗೆ ಬಾಲ್ಯದಿಂದಲೇ ತನ್ನ ಅಧಿಕಾರ, ಹಕ್ಕುಗಳ ಅರಿವಿರಬೇಕಾಗುತ್ತದೆ. ಈ ಅರಿವು ಮೂಡಿಸುವ ಜವಾಬ್ದಾರಿ ಪೋಷಕರದ್ದು. ಮಾನವ ಸಂಪನ್ಮೂಲದಲ್ಲಿ ಸುಮಾರು ಅರ್ಧ ಪಾಲು ಹೆಣ್ಣುಗಳದ್ದು. ಹೆಣ್ಣೊಬ್ಬಳು ತನ್ನ ಶಕ್ತಿ ಸಾಮರ್ಥ್ಯಗಳ ಬಲದಿಂದ ಬದುಕಬೇಕು ಹಾಗೂ ಎಲ್ಲ ಅಡ್ಡಿ ಆತಂಕಗಳನ್ನು ಸ್ವತಃ ನಿಭಾಯಿಸಿಕೊಳ್ಳಬೇಕಾದರೆ ಉತ್ತಮ ಶಿಕ್ಷಣ ನೀಡಬೇಕು ಎಂದರು.ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ಬೇಡ ಎಂಬ ಘೋಷಣೆಗಳನ್ನು 
ಕೂಗಿ, ಬಿತ್ತಿ ಪತ್ರವನ್ನ ಪ್ರದರ್ಶಿಸಿದರು.