ಹೆಣ್ಣುಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ :ಕೊಣ್ಣುರ

????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಭಾಲ್ಕಿ: ಫೆ.7:ಹೆಣ್ಣುಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ನ್ಯಾಯಮೂರ್ತಿ ಆನಂದ ಕೊಣ್ಣೂರ ಅಭಿಪ್ರಾಯಪಟ್ಟರು.
ಪಟ್ಟಣದ ಬೊಮ್ಮಗೊಂಡೇಶ್ವರ ವೃತ್ತದ ಹತ್ತಿರ ಮಂಗಳವಾರ ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ರಾಜ್ಯ ಪಿ.ಸಿ ಮತ್ತು ಎನ್‍ಡಿಟಿ ಕೋಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ಬಾವುಟ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಹೆಣ್ಣುಮಕ್ಕಳ ರಕ್ಷಣೆಗಾಗಿ ನಾವೆಲ್ಲರೂ ಶ್ರಮ ಪಡಬೇಕಿದೆ, ಲಿಂಗಾನುಪಾತ ಅಸಮತೋಲನವಾದರೆ ಬದುಕು ಕಸ್ಟಕರವಾಗುತ್ತದೆ. ಹೆಣ್ಣುಮಕ್ಕಳ ರಕ್ಷಣೆಗಾಗಿ ಲಿಂಗ ಪಕ್ಷಪಾತ ಮತ್ತು ಲಿಂಗ ಆಯ್ಕೆ ಮಾಡುವುದನ್ನು ತಡೆಗಟ್ಟಬೇಕಿದೆ. ಹೆಣ್ಣುಮಕ್ಕಳ ಉಳಿವು ಮತ್ತು ಅವರ ರಕ್ಷಣೆಗಾಗಿ ಜಾಗೃತಿ ಮೂಡಿಸಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ನಾನ್ನುಡಿಯಂತೆ, ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದು ಅತ್ಯವಶ್ಯಕವಾಗಿದೆ. ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಸಮಾನತೆ ಕಂಡುಕೊಳ್ಳಬೇಕಿದೆ ಎಂದು ಹೇಳಿದರು.
ನ್ಯಾಯಮೂರ್ತಿ ಅಭಿನಯ ಕುಲಕರ್ಣಿ ಮಾತನಾಡಿ, ಹೆಣ್ಣುಮಗುವನ್ನು ಕಡ್ಡಾಯವಾಗಿ ಶಾಲೆಗೆ ದಾಖಲಿಸಿ, ನಿರಂತರವಾಗಿ ಅವಳು ಶಾಲೆಗೆ ಹೋಗುತ್ತಿರುವ ಬಗ್ಗೆ ಗಮನ ಹರಿಸಬೇಕು. ವರದಕ್ಷಿಣೆ ಮತ್ತು ಬಾಲ್ಯ ವಿವಾಹ ವಿರೋಧಿಸುವ ಮತ್ತು ಸರಳ ವಿವಾಹ ಪ್ರೊತ್ಸಾಹಿಸುವ ಜಾಗೃತಿಯಾಗಬೇಕು. ಹೆಣ್ಣುಮಕ್ಕಳ ಸಾಧನೆ ಪ್ರೊತ್ಸಾಹಿಸಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ ಬಾಲವಾಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಶಾಂತ ಬಿರಾದಾರ ಹೆಣ್ಣುಮಕ್ಕಳ ರಕ್ಷಣೆ ಮತ್ತು ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.
ಜಾಗೃತಿ ಜಾಥಾವು ಪಟ್ಟಣದ ಬೊಮ್ಮಗೊಂಡೇಶ್ವರ ವೃತ್ತದಿಂದ ಬಸ್ ನಿಲ್ದಾಣ, ಡಾ| ಬಿ.ಆರ್.ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತದ ಮೂಲಕ ಹಾದು ಪುರಭವನದಲ್ಲಿ ಸಮಾವೇಶ ಗೊಂಡಿತು.