
ದಾವಣಗೆರೆ. ಮಾ.೧೩;ನಗರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾದ ಸೇಂಟ್ ಜಾನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಅಂತರಾಷ್ಟಿçÃಯ ಮಹಿಳಾ ದಿನಾಚರಣೆ” ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಹಶಿಕ್ಷಕಿ ಶ್ರೀಮತಿ ಮಂಗಳ ಜಿ.ಕೆ.ರವರು ಜಿ.ಎಸ್. ಶಿವರುದ್ರಪ್ಪನವರ ಭಾವಗೀತೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಕೇಂದ್ರ ಪಠ್ಯಕ್ರಮದ ಪ್ರಾಂಶುಪಾಲರಾದ ಸೈಯದ್ ಆರಿಫ್ ಆರ್ ಎಲ್ಲರನ್ನು ಸ್ವಾಗತಿಸಿದರು. ಸಂಸ್ಥೆಯ ಗೌರವಾನ್ವಿತ ಕಾರ್ಯದರ್ಶಿಗಳಾದ ಟಿ.ಎಂ. ಉಮಾಪತಯ್ಯ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮಹಿಳೆಯರ ಧೈರ್ಯ, ಸ್ಥೆöÊರ್ಯ, ತಾಳ್ಮೆ, ಸಂಯಮದ ಗುಣಗಳನ್ನು ಮುಕ್ತ ಕಂಠದಿAದ ಹೊಗಳಿದರು. ಸಂಸ್ಥೆಯ ಸಹ ಶಿಕ್ಷಕರಾದ ಮೌನೇಶ್ ಎನ್ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಹಿನ್ನೆಲೆ, ಪ್ರಾಮುಖ್ಯತೆ, ಸಂವಿಧಾನದಿAದ ಸ್ತಿçÃಯರಿಗೆ ದೊರೆತಿರುವ ಸವಲತ್ತುಗಳ ಬಗ್ಗೆ ತಿಳಿಸಿದರು. ಸೇಂಟ್ ಜಾನ್ಸ್ ವಿದ್ಯಾಸಂಸ್ಥೆಯ ಖಜಾಂಚಿಗಳಾದ ಪ್ರವೀಣ್ ಹುಲ್ಲುಮನೆಯವರು ಮಹಿಳಾ ದಿನಾಚರಣೆಯ ಅಂಗವಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ವಿವಿಧ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಂಡು ಅದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಿದರು. ಸಂಸ್ಥೆಯ ಸಹ ಶಿಕ್ಷಕರಾದ ಶ್ರೀಯುತ ಸಿದ್ದೇಶ ಎಸ್.ಜಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಕೇಂದ್ರ ಪಠ್ಯಕ್ರಮದ ಮತ್ತು ರಾಜ್ಯ ಪ್ರಾಂಶುಪಾಲರುಗಳು ಬೋಧಕ ಮತ್ತು ಬೋಧಕೇತರ ವರ್ಗದವರು ಪಾಲ್ಗೊಂಡಿದ್ದರು.