ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ

ಕಲಬುರಗಿ,ಅ.27:ಆಳಂದ ತಾಲೂಕಿನ ನಿಂಬರ್ಗಾ ಮತ್ತು ಬಂಟ್ಟರ್ಗಾ ಗ್ರಾಮದ ಮಧ್ಯದಲ್ಲಿರುವ ಹಳ್ಳದ ಹತ್ತಿರದಲ್ಲಿ ದಿನಾಂಕ: 26-09-2020ರಂದು ಪತ್ತೆಯಾದ ಸುಮಾರು ಒಂದು ದಿವಸದ ಹೆಣ್ಣು ಮಗುವನ್ನು ಮಕ್ಕಳ ಸಹಾಯವಾಣಿ ಡಾನ್ ಬಾಸ್ಕೋ ಪ್ಯಾರ್ ಸಿಬ್ಬಂದಿಯವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಮಗುವಿನ ಪಾಲನೆ ಹಾಗೂ ಪೋಷಣೆಗಾಗಿ ದಿನಾಂಕ: 28-09-2020 ರಂದು ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮೂಲ್ಯ ಶಿಶುಗೃಹದಲ್ಲಿ ದಾಖಲಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮೂಲ್ಯ ಶಿಶು ಗೃಹದ ಅಧೀಕ್ಷಕರು ತಿಳಿಸಿದ್ದಾರೆ.
ಗೋಧಿ ಬಣ್ಣ ಹೊಂದಿರುವ ಈ ಹೆಣ್ಣು ಮಗುವಿನ ಆರೋಗ್ಯ ಸ್ಥಿತಿ ಸಾಮಾನ್ಯವಾಗಿದೆ. ಈ ಹೆಣ್ಣು ಮಗುವಿನ ಪಾಲಕರು ಮತ್ತು ಪೋಷಕರು ಪ್ರಕಟಣೆಯಾದ 30 ದಿನದೊಳಗಾಗಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಅಧೀಕ್ಷಕರು, ಅಮೂಲ್ಯ ಶಿಶು ಗೃಹ, ಆಳಂದ ರಸ್ತೆ ಕಲಬುರಗಿ ಕಚೇರಿಗೆ ಭೇಟಿ ನೀಡಲು ಕೋರಿದೆ. ತಪ್ಪಿದಲ್ಲಿ ಕಾನೂನು ಪ್ರಕಾರ ಈ ಹೆಣ್ಣು ಮಗುವಿನ ದತ್ತು ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಮೂಲ್ಯ ಶಿಶುಗೃಹದ ಅಧೀಕ್ಷಕರನ್ನು ದೂರವಾಣಿ ಸಂಖ್ಯೆ 08472-265588 ಹಾಗೂ ಮೊಬೈಲ್ ಸಂಖ್ಯೆ 7406550788ಗಳನ್ನು ಸಂಪರ್ಕಿಸಬೇಕೆಂದು ಕೋರಿದ್ದಾರೆ.