ಹೆತ್ತ ಮಗನನ್ನು ಕೊಚ್ಚಿಕೊಂದ ಮಾನಸಿಕ ಅಸ್ವಸ್ಥ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

ಮೈಸೂರು,ಜ.14- ನಾಲ್ಕು ದಿನಗಳ ಹಿಂದೆ ಹೆತ್ತ ಗಂಡು ಮಗುವನ್ನೇ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದ ಮಾನಸಿಕ ಅಸ್ವಸ್ಥ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹೆಚ್ ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.
ಯಡತೊರೆ ಗ್ರಾಮದ ನಿವಾಸಿ ಮಾನಸಿಕ ಅಸ್ವಸ್ಥೆ ಭವಾನಿ ಎಂಬುವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಈಕೆ ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ 4 ವರ್ಷದ ಪುತ್ರ ಶ್ರೀನಿವಾಸ್ ನನ್ನು ಮನಬಂದಂತೆ ಮಚ್ಚಿನಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಳು.
ಈ ಬಗ್ಗೆ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಎಲ್ಲೋ ತಲೆಮರೆಸಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿತ್ತು.
ಅದರೆ ಇಂದು ಬೆಳಿಗ್ಗೆ ಆರೋಪಿ ಮಹಿಳೆಯ ಮೃತದೇಹ ಹೆಚ್ ಡಿ ಕೋಟೆ ತಾಲೂಕಿನ ಮೇಟಿಕುಪ್ಪೆ ಕೆರೆಯಲ್ಲಿ ಪತ್ತೆಯಾಗಿದೆ.