ಹೆದ್ದಾರಿಯಲ್ಲಿ ಕಾರು ಅಪಘಾತ: ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ: ಏ.07:- ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಕಾರು ಅಪಘಾತ ಗೊಂಡು ಇಬ್ಬರು ಗಾಯಗೊಂಡಿರುವ ಘಟನೆ ಪಶ್ಚಿಮವಾಹಿನಿಯ ಸಾರಥಿ ಡಾಬದ ಬಳಿ ನಡೆಸಿದೆ.
ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಎಡಭಾಗದಲ್ಲಿ ಹಾಕಲಾಗಿದ್ದ ಸಾರಥಿ ಡಾಬದ ಜಾಹಿರಾತು ಫಲಕಕ್ಕೆ ಡಿಕ್ಕಿ ಹೊಡೆದು ಒಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು, ಚಾಲಕನಿಗೆ ಸಣ್ಣ ಪುಟ್ಟಗಾಯವಾಗಿದೆ ಎಂದು ತಿಳಿದು ಬಂದಿದೆ.
ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಪ್ರಕರಣವಾಗಿದ್ದು ಗಾಯಗೊಂಡವರ ವಿಳಾಸ ತಿಳಿದು ಬಂದಿಲ್ಲ.