
ಆನೇಕಲ್, ಜು. ೧೬- ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಕ್ಕೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ ಎಂದು ಹೆನ್ನಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನಿರತ್ನ ಮುನಿರಾಜುರವರು ತಿಳಿಸಿದರು.
ಅವರು ಹೆನ್ನಾಗರ ಗ್ರಾಮ ಪಂಚಾಯಿತಿಯ ಮೊದಲನೆ ಸುತ್ತಿನ ಗ್ರಾಮಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸರ್ಕಾರ ಮತ್ತು ಪಂಚಾಯಿತಿ ಅನುದಾನವನ್ನು ಕ್ರೂಡೀಕರಿಸಿ ಜನರ ಮನೆ ಬಾಲಿಗಿಲಿಗೆ ಸರ್ಕಾರ ಹಾಗೂ ಪಂಚಾಯಿತಿಯ ಕಾರ್ಯಕ್ರಮಗಳನ್ನು ನೀಡಲಾಗಿದೆ ಎಂದರು. ಪ್ರತಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ಥಾಪನೆ ಜೊತೆಗೆ ಅಂಬೇಡ್ಕರ್ ಭವನ ನಿರ್ಮಾಣ, ಗ್ರಂಥಾಲಯ ನಿರ್ಮಾಣ, ಕುಡಿಯುವ ನೀರು, ರಸ್ತೆ, ಚರಂಡಿಗಳ ಅಭಿವೃದ್ದಿ. ಸ್ವಚ್ಚತೆಗೆ ಹೆಚ್ಚಿಗೆ ಆದ್ಯತೆ, ಸ್ತೀ ಶಕ್ತಿ ಸಬಲೀಕರಣ, ಸರ್ಕಾರಿ ಶಾಲೆಗಳ ಪ್ರಗತಿ, ಶಿಕ್ಷಣಕ್ಕೆ ಪೋತ್ಸಾಹ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಪಂಚಾಯಿತಿ ವತಿಯಿಂದ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಮ್ಮ ಹೆನ್ನಾಗರ ಗ್ರಾಮ ಪಂಚಾಯಿತಿ ಅನೇಕ ಪ್ರಶಸ್ತಿಗಳು ನೀಡಿ ಗೌರವಿಸಿದೆ ಎಂದರು.
ಗ್ರಾಮಸಭೆಯಲ್ಲಿ ಹೆನ್ನಾಗರ ಗ್ರಾಮ ಪಂಚಾಯಿತಿ ಉಪಾದ್ಯಕ್ಷ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಕುಮಾರ್, ಪಿಡಿಓ ಸಿದ್ದರಾಜು ಮತ್ತು ಇಲಾಖೆ ಅದಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಾರ್ವಜನಿಕರು ಮತ್ತು ಪಂಚಾಯಿತಿ ಸಿಬ್ಬಂದಿ ವರ್ಗ ಭಾಗವಹಿಸಿದ್ದರು