ಹೆಪಟೈಟಿಸ್ ರೋಗದಿಂದ ತಪ್ಪಿಸಿಕೊಳ್ಳಲು ಮುಂಜಾಗ್ರತ ಕ್ರಮ ಅವಶ್ಯ: ಡಿಹೆಚ್‌ಒ ಡಾ.ಸುರೇಂದ್ರಬಾಬು

ರಾಯಚೂರು,ಆ.೦೪- ವೈರಲ್ ಹೆಪಟೈಟಿಸ್ ರೋಗದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯವಾಗಿದೆ. ರಾಷ್ಟ್ರೀಯ ವೈರಲ್ ಹೆಪಟೈಟಿಸ್ ನಿಯಂತ್ರಣ ಕಾರ್ಯಕ್ರಮವು ಒಂದು ಸಮಗ್ರ ಯೋಜನೆಯಾಗಿದ್ದು, ಹೆಪಟೈಟಿಸ್ ಎ.ಬಿ.ಸಿ.ಡಿ.ಇ ಮತ್ತು ಜಿ ಅನ್ನು ತಡೆಗಟ್ಟುವ, ನಿಯಂತ್ರಣ ಮಾಡುವ ಹಾಗೂ ೨೦೩೦ರ ವೇಳೆಗೆ ಹೆಪಟೈಟಿಸ್ ಮುಕ್ತ ದೇಶವನ್ನಾಗಿಸುವ ಗುರಿ ಹೊಂದಿದೆ. ಇದರಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು ಅವರು ಹೇಳಿದರು.
ಅವರು ಆ.೦(ಬುಧವಾರ) ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಾಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದು, ರಾಷ್ಟ್ರೀಯ ವೈರಲ್ ಹೆಪಟೈಟಿಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ತಾಲೂಕ ಆರೋಗ್ಯ ಅಧಿಕಾರಿ ಡಾ.ಎಂ.ಡಿ.ಶಾಕಿರ ಅವರು ಮಾತನಾಡಿ, ಸುರಕ್ಷೀತವಾದ ನೀರು ಸೇವನೆ ಮಾಡಬೇಕು ನವಜಾತು ಶಿಶುಗಳಿಗೆ ಹೆಪಟೈಟಿಸ ಬಿ ಲಸಿಕೆ ಕೊಡಿಸಬೇಕು ಸ್ವಚ್ಛ ಶೌಚಾಲಯ ಉಪಯೋಗ ಹಾಗೂ ನೈರ್ಮಲ್ಯ ಕಾಪಾಡಬೇಕು ಸುತ್ತ ಮುತ್ತಲಿನ ಪರಿಸರವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ರೋಗ ಕಾಣಿಸಿಕೊಂಡರೆ ತಕ್ಷಣವೇ ವೈದ್ಯರನ್ನು ಕಾಣಬೇಕು ಎಂದರು.
ಜಿಲ್ಲಾ ಶಸ್ತ್ರ ಚಿಕಿತ್ಸಕರು ಡಾ. ವಿಜಯ ಶಂಕರ ಅವರು ಮಾತನಾಡಿ, ಹೆಪಟೈಟಿಸ ರೋಗಕ್ಕೆ ರಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತವಾದ ಔಷಧಗಳು ಲಭ್ಯವಿದ್ದು ಅದನ್ನು ರೋಗಿಗಳಿಗೆ ಉಚಿತವಾಗಿ ನೀಡಲಾಗುವದು ಹೆಪಟೈಟಿಸ್ ಖಾಯಿಲೆಗೆ ಉಚಿತ ತಪಾಸಣೆ ಹಾಗೂ ಪ್ರಯೋಗಾಲಯ ಸೇವೆ ಇರುತ್ತದೆ. ಜಿಲ್ಲಾ ಮಟ್ಟದ ಸರ್ಕಾರಿ ಆಸ್ಪತ್ರೆ/ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಉಚಿತ ತಪಾಸಣೆ, ಹೆಚ್ಚಿನ ಪ್ರಯೋಗಾಲಯ ಸೇವೆಗಳು ಹಾಗೂ ಚಿಕಿತ್ಸೆವಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಣೇಶ, ಡಾ. ಬಸವರಾಜ ಪೀರಾಪುರ, ಡಾ. ಅರುಣ ಮಸ್ಕಿ ಹಾಗೂ ಕ್ಷಯರೋಗ ಘಟಕದ ಸಿಬ್ಬಂದಿ ವರ್ಗ ಮತ್ತು ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.