ಹೆಬ್ಬಾರ್ ಅವಿರೋಧ ಆಯ್ಕೆ

ಶಿರಸಿ,ನ21 : ಜಿಲ್ಲಾ ಮಧ್ಯವರ್ತಿ ಬ್ಯಾಂಕ್‍ಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರಾಜ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮೋಹನದಾಸ ನಾಯಕ ಆಯ್ಕೆಯಾದರು. ಜಿಲ್ಲಾ ಮಧ್ಯವರ್ತಿ ಬ್ಯಾಂಕ್‍ಗೆ ನಡೆದ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳು ಬಿಜೆಪಿಯ ಅಭ್ಯರ್ಥಿಗಳ ಪಾಲಾಗಿವೆ.
ಇದೆ ಸಂದರ್ಭದಲ್ಲಿ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರುಗಳಿಗೆ ಸಚಿವರು ಅಭಿನಂದನೆಗಳನ್ನು ಸಲ್ಲಿಸಿದರು. ಬ್ಯಾಂಕ್‍ನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್‍ನ ಸರ್ವ ಸದಸ್ಯರು ಹಾಗೂ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಹಾಜರಿದ್ದರು.