ಹೆಬ್ಬಾಳ ಕ್ಷೇತ್ರವನ್ನು ಅಭಿವೃದ್ಧಿ ಮಾಡುವಲ್ಲಿ ಶಾಸಕರು ವಿಫಲ: ಕಟ್ಟಾ ಜಗದೀಶ್

ಬೆಂಗಳೂರು, ಮೇ. ೪- ಈ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕರು ಹೆಬ್ಬಾಳ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಮಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಟ್ಟಾ ಜಗದೀಶ್ ರವರು ತಿಳಿಸಿದರು.
ಕ್ಷೇತ್ರದ ಸಂಜಯನಗರ ವಾರ್ಡ್‌ನಲ್ಲಿ ಪಾದಯಾತ್ರೆ ನಡೆಸಿ ಮಾತನಾಡಿದ ಅವರು ಕ್ಷೇತ್ರದಾದ್ಯಂತ ಸಮರ್ಪಕವಾಗಿ ರಸ್ತೆಗಳ ಅಭಿವೃದ್ಧಿ ಪಡಿಸುವಲ್ಲಿ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ತಿಳಿಸಿ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲ ಹಾಗೂ ಕೆಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಬವಣೆ ಅತ್ಯಧಿಕವಾಗಿದೆ ಎಂದು ತಿಳಿಸಿದರು.
ಕ್ಷೇತ್ರದಲ್ಲಿ ಹಲವು ಭಾಗಗಳಲ್ಲಿ ಗಾಂಜಾ ಮತ್ತು ಡ್ರಗ್ಸ್ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದರೂ ಅದಕ್ಕೆ ಕಡಿವಾಣ ಹಾಕಲು ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಕಟ್ಟಾ ಜಗದೀಶ್ ತಿಳಿಸಿದರು.
ಪ್ರಚಾರದ ವೇಳೆ ಮಾಜಿ ಬಿಬಿಎಂಪಿ ಸದಸ್ಯ ಪಾಟೀಲ್, ಕಿಟ್ಟಣ್ಣ, ಇಂದಿರಾ ಸುಭಾಷ್, ಮಂಡಲ ಅಧ್ಯಕ್ಷ ಅಜೇಯ್, ಮುನೇಗೌಡ, ಮಂಜಣ್ಣ ಸೇರಿದಂತೆ ಹಲವಾರು ಮುಖಂಡರು, ಸಾವಿರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಟ್ಟಾ ಜಗದೀಶ್ ರವರು ಸಂಜಯನಗರ ವಾರ್ಡ್‌ನಲ್ಲಿ ತೆರೆದ ವಾಹನದಲ್ಲಿ ಪ್ರಚಾರ ನಡಸಿ ಮತಯಾಚನೆ ಮಾಡಿದರು. ಮಾಜಿ ಬಿಬಿಎಂಪಿ ಸದಸ್ಯ ಪಾಟೀಲ್, ಕಿಟ್ಟಣ್ಣ, ಇಂದಿರಾ ಸುಭಾಶ್, ಮಂಡಲ ಅಧ್ಯಕ್ಷ ಅಜಯ್, ಮುನೇಗೌಡ, ಮಂಜಣ್ಣ, ಮತ್ತಿತರರು ಉಪಸ್ಥಿತರಿದ್ದರು.