ಹೆಬ್ಬಾಳ ರಸ್ತೆ ವಿಸ್ತರಣೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು,ನ.೨೧- ಹೆಬ್ಬಾಳ ಮೇಲ್ಸೇತುವೆಯ ರಸ್ತೆ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಪಕ್ಷದ ನಾಯಕರು ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.ಈ ವೇಳೆ ಶಾಸಕರಾದ ಕೃಷ್ಣ ಬೈರೇಗೌಡ, ಬೈರತಿ,ಲ ಬಸವರಾಜ್, ಪಾಲಿಕೆ ಮಾಜಿ ಆಡಳಿತ ಪಕ್ಷ ನಾಯಕ ಉದಯ್ ಕುಮಾರ್ ಹಿರಿಯ ನಾಯಕರು ಪಾಲ್ಗೊಂಡು ಶೀಘ್ರ ರಸ್ತೆ ಅಗಲೀಕರಣ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಬೆಂಗಳೂರಿನ ಸಮಗ್ರ ಅಭಿವೃದ್ಧಿ ಮಾಡುವಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಅದರಲ್ಲೂ ಬೆಂಗಳೂರು ಉಸ್ತುವಾರಿ ವಹಿಸಿರುವ ಮುಖ್ಯಮಂತ್ರಿಗಳು ಈ ಕಡೆ ಗಮನ ಹರಿಸುತ್ತಿಲ್ಲ ಎಂದು ರಾಮಲಿಂಗಾರೆಡ್ಡಿ ಸೇರಿದಂತೆ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.ಶಾಸಕ ಕೃಷ್ಣ ಬೈರೇಗೌಡ ಮಾತನಾಡಿ ಲೂಟಿ ಹೊಡೆಯಲಷ್ಟೇ ಬಿಜೆಪಿ ನಾಯಕರು ಮತ್ತು ರಾಜ್ಯ ಸರ್ಕಾರ ಸೀಮಿತವಾಗಿದೆ. ರಸ್ತೆ ಅಗಲೀಕರಣ ಮಾಡುವಂತೆ ಹಲವು ವರ್ಷದಿಂದ ಒತ್ತಾಯಿಸುತ್ತಿದ್ದರೂ ಕಿವಿಗೆ ಹಾಕಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಹೆಬ್ಬಾಳ ಮೇಲ್ಸೇತುವೆ ಅಗಲೀಕರಣಕ್ಕೆ ಒತ್ತಯಿಸಿ ಎಸ್ಟೀಂ ಮಾಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಶಾಸಕರಾದ ಕೃಷ್ಣ ಭೈರೇಗೌಡ, ಬೈರತಿ ಸುರೇಶ್ ಸೇರಿದಂತೆ ಮತ್ತಿತರರು ಇದ್ದಾರೆ.

ಬೆಂಗಳೂರು ಚಿನ್ನದ ಮೊಟ್ಟೆ ಇಡುವ ಕೋಳಿ. ಆ ಕೋಳಿಯನ್ನು ಸಾಕುವುದು ಸರ್ಕಾರದ ಜವಾಬ್ದಾರಿ. ಆದರೆ ಆ ಕೆಲಸವನ್ನು ಮಾಡುವಲ್ಲಿ ವಿಫಲವಾಗಿದೆ ಇದರಿಂದಾಗಿ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ಕೋಳಿಯ ಹೊಟ್ಟೆ ಬಗೆದು ಕರುಳು ಕಿತ್ತು ಹಾಕಿ ಅದನ್ನು ನುಂಗಿ ನೀರು ಕುಡಿಯಲು ಬಿಜೆಪಿ ನೇತೃತ್ವದ ಸರ್ಕಾರ ಮುಂದಾಗಿದೆ ಬೆಂಗಳೂರು ಮಹಾನಗರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.
ರಾಜ್ಯದ ಒಟ್ಟಾರೆ ಆದಾಯದಲ್ಲಿ ೬೦ ರಷ್ಟು ಆದಾಯ ಬೆಂಗಳೂರು ನಗರ ಒಂದರಲ್ಲೇ ಬರುತ್ತಿದೆ ಆದರೂ ರಾಜ್ಯ ಸರ್ಕಾರ ಬೆಂಗಳೂರು ನಗರದ ಬಗ್ಗೆ ನಿರ್ಲಕ್ಷ ವಹಿಸಿದೆ ಎಂದು ಅವರು ಕಿರಿ ಕಾಡಿದರು.ಬೆಂಗಳೂರಿನ ಜನತೆ ತೆರಿಗೆ ಕಟ್ಟದಿದ್ದರೆ ರಾಜ್ಯವನ್ನು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ ಅವರು ಬೆಂಗಳೂರು ನಗರ ಒಂದರಲ್ಲಿ ಅತಿ ಹೆಚ್ಚಿನ ಆದಾಯ ತೆರಿಗೆ ಪಾವತಿಯಾಗುತ್ತಿದೆ ಹೀಗಿದ್ದರೂ ಬೆಂಗಳೂರಿನ ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.ಇಡೀ ದೇಶಕ್ಕೆ ಹೆಚ್ಚು ಆದಾಯದಲ್ಲಿರುವ ಬೆಂಗಳೂರು ಬಿಜೆಪಿ ನಾಯಕರ ಕೈಗೆ ಸಿಕ್ಕಿ ನಲುಗುತ್ತಿದೆ. ಮೂಲ ಸೌಲಭ್ಯಗಳಿಲ್ಲದೆ ಸಮಸ್ಯೆ ಅನುಭವಿಸುವಂತಹ ಆಗಿದೆ ಎಂದು ದೂರಿದ ಅವರು ಜನರ ಸಂಕಷ್ಟ ಬವಣೆಗೆ ತಾಜ ಉದಾಹರಣೆ ಮಾಡದಿರುವುದೇ ತಾಜ ಉದಾಹರಣೆ ದೂರಿದರು.ಶಾಸಕ ಬೈರತಿ ಬಸವರಾಜ್ ಅವರು ಹೆಬ್ಬಾಳ ಮೇಲ್ಸೇತು ವೆಯನ್ನು ಅಗಲ ಮಾಡಿ . ಜನರಿಗಾಗುತ್ತಿರುವ ಸಮಸ್ಯೆ ತಪ್ಪಿಸಿ ಎಂದು ಸರ್ಕಾರವನ್ನು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.