ಭೂಪಾಲ್, ಮೇ.೨೯- ಭಾರತೀಯ ವಾಯುಪಡೆಯ ಅಪಾಚೆ ಹೆಲಿಕಾಪ್ಟರ್ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಹಳ್ಳಿಯೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಸದ್ಯ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ ಜನರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಭಾರತೀಯ ವಾಯುಸೇನೆ ಮತ್ತು ಜಿಲ್ಲಾಡಳಿತ ತಂಡ ಸ್ಥಳಕ್ಕೆ ತಲುಪಿದೆ.
ಮೂಲಗಳ ಪ್ರಕಾರ, ಹೆಲಿಕಾಪ್ಟರ್ ನಿಯಮಿತ ಹಾರಾಟದಲ್ಲಿ ಕೆಲವು ದೋಷಗಳನ್ನು ಕಂಡು ಬಂದಿವೆ. ಹೀಗಾಗಿ ಅದನ್ನು ಭಿಂಡ್ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಇಳಿಸಲಾಗಿದೆ.
ಇದಕ್ಕೆ ತಾಂತ್ರಿಕ ದೋಷವೇ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಡೆದ ಕೂಡಲೇ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಜಮಾಯಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.