ಹೆಲ್ಮೆಟ್ ಧರಿಸಲು ಜಾಗೃತಿ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಜು.5: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂದು ವಾಹನ ಸವಾರರಿಗೆ ಹೆಲ್ಮೆಟ್ ಧರಿಸಬೇಕು ಎಂದು ಹೆಲ್ಮೆಟ್ ಸಂಚಾರಿ ಜಾಗೃತಿ ಮೂಡಿಸಲಾಯಿತು.
ನಗರದ ಪೊಲೀಸ್ ಉಪಾಧೀಕ್ಷಕರ ಕಛೇರಿಯ ವತಿಯಿಂದ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ವಾಹನ ಚಲಿಸುತಿರುವ ಸಮಯದಲ್ಲಿ ಪೋನ್ ಗಳನ್ನು ಉಪಯೋಗಿಸಬಾರದು, ಹೆಚ್ಚು ಧ್ವನಿ ವಾರ್ಧಕಗಳನ್ನು ಬಳಸಬಾರದು ಮತ್ತು ವಾಹನ ಸವಾರರು ವಾಹನಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸದಾಕಡ್ಡಾಯವಾಗಿ ಜೊತೆಯಲ್ಲಿ ಇಟ್ಟುಕೊಂಡಿರಬೇಕು. ಹೆಲ್ಮೆಟ್‌ ಧರಿಸದೆ ವಾಹನ ಚಲಾಯಿಸಿದರೆ ಸ್ಥಳದಲ್ಲಿಯೇ ದಂಡ ತೆರಬೇಕಾಗುತ್ತದೆ. 18 ವರ್ಷದ ಒಳಗಿನವರು ವಾಹನ ಚಲಾಯಿಸುವುದು ಅಪರಾಧ ಹಾಗೂ ವಾಹನ ಚಲಾಯಿಸುವಾಗ ಹೆಲ್ಮೆಟ್‌ ಧರಿಸುವುದರಿಂದ ಸಂಭವನೀಯ ಅಪಘಾತಗಳಿಂದ ತಲೆಗೆ ಪೆಟ್ಟಾಗುವುವುದು ತಪ್ಪುತ್ತದೆ. ಪೊಲೀಸರು ನೀಡುವ ಸೂಚನೆಗಳನ್ನು ಅಗತ್ಯವಾಗಿ ಪಾಲಿಸಬೇಕು ಎಂದು ಡಿ.ವೈ.ಎಸ್. ಪಿ ವೆಂಕಟೇಶ ತಿಳಿಸಿದರು.
ನಗರದ ಪಿ.ಎಸ್.ಐ ತಿಮ್ಮಣ್ಣ ನಾಯಕ, ತೆಕ್ಕಲಕೋಟೆ ಪಿ.ಎಸ್.ಐ ಶಾಂತಮೂರ್ತಿ, ಸಿರಿಗೇರಿ ಪಿ.ಎಸ್.ಐ ಸದ್ದಾಂ ಹುಸೇನ್‌ ಹಾಗೂ ಪೇದೆಗಳು ಇದ್ದರು.