ಹೆಸರಿಗಷ್ಟೇ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಇಲ್ಲ, ಪ್ರತಿವರ್ಷ 2000 ಕೋಟಿ ರೂ ಮೀಸಲಿಡಿ : ಅಣಬಿ

ಕಲಬುರಗಿ:ಸೆ.16 ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಪ್ರತಿವರ್ಷ 2 ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕು .ಹೆಸರಿಗಷ್ಟೇ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಇದೆ. ಆದರೆ ಭಾಗ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ನಯ ಸವೆರ ಸಂಘಟನೆ ಅಧ್ಯಕ್ಷ ಮೋದಿನ್ ಪಟೇಲ್ ಅಣಬಿ ಹೇಳಿದರು.
ದಯಮಾಡಿ ಹಣ ಮೀಸಲಿಡಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ ಭರ್ತಿ ಮಾಡಿ. ಇಲ್ಲಿ ಅನೇಕ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ಸೇರ್ಪಡೆ ಮಾಡಿಕೊಳ್ಳಬೇಕು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಗಿ ಒಂದು ವರ್ಷ ಆಯ್ತು ಆದರೆ ಇಲ್ಲಿಯವರೆಗೆ ಒಂದು ಬಜೆಟ್ ಇಲ್ಲ ,371 ಜೆ ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಇಲ್ಲಿಯ ಜನರ ವಿವಿಧ ಬೇಡಿಕೆ ಗಳು 371 ಜೆ ಕಲಂ ವಿಶೇಷ ಕೋಶ ಪ್ರಧಾನ ಕಛೇರಿ ಬೆಂಗ್ಳೂರಿನಲ್ಲಿ ಇದೆ. ಆದರೆ ಪ್ರದೇಶಿಕ ಕಛೇರಿ ಕಲ್ಬುರ್ಗಿಯಲ್ಲಿ ಸ್ಥಾಪಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ನೀಡಿರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು .ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಹೆಚ್ಚು ಬಲಪಡಿಸುವ ಮೂಲಕ ಅಭಿವೃದ್ದಿ ಕಾರ್ಯಗಳಿಗೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.