ಹೇಮರೆಡ್ಡಿ ಮಲ್ಲಮ್ಮರ ಆದರ್ಶ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಲಿ

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಚಿತ್ರದುರ್ಗ.ಮೇ.೧೧: ಮಹಾಸಾಧ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮರ ಆದರ್ಶ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಲಿ ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಹೇಮರೆಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಮಹನೀಯರು, ದಾರ್ಶನಿಕರು ಸಮಾಜ ಸುಧಾರಣೆ ಹಾಗೂ ಸಮಾಜದ ಉದ್ಧಾರಕ್ಕಾಗಿ ಜನಿಸಿದಂತವರು. ಮಹನೀಯರನ್ನು ಒಂದು ಜಾತಿಗೆ ಸೀಮಿತಗೊಳಿಸದೇ ಮಹನೀಯರ ಆದರ್ಶ, ಚಿಂತನೆಗಳನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.ಹೇಮರೆಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಚಿದಾನಂದಪ್ಪ ಮಾತನಾಡಿ, ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ನಾರಿಕುಲಕ್ಕೆ ಮಾದರಿಯಾಗಿದ್ದಾರೆ. ಸಮಾಜದ ಒಳತಿಗಾಗಿ ಬದುಕಿದ ಹೇಮಾರೆಡ್ಡಿ ಮಲ್ಲಮ್ಮ ಅವರ ಮಾರ್ಗದರ್ಶದಲ್ಲಿ ನಡೆದರೆ ಎಲ್ಲರಿಗೂ ಒಳಿತಾಗಲಿದೆ ಎಂದರು.