ಹೈಕಮಾಂಡ್ ಜೊತೆ ಬೊಮ್ಮಾಯಿ ಚರ್ಚೆ

ಬೆಂಗಳೂರು, ಆ.೮-ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿ ಪಕ್ಷ ನಾಯಕ ಸ್ಥಾನಕ್ಕೆ ಇನ್ನೂ ಯಾರನ್ನು ಆಯ್ಕೆ ಮಾಡಿಲ್ಲ. ವಿಪಕ್ಷ ನಾಯಕನಿಲ್ಲದೆ ವಿಧಾನ ಸಭೆಯ ಅಧಿವಶೇನವು ನಡೆದಿತ್ತು. ಇದರ ಬೆನ್ನಲ್ಲೆ ಬೊಮ್ಯಾಯಿ ಅವರು ದೆಹಲಿಗೆ ತೆರಳಿರುವುದು ಕುತೂಹಲಕ್ಕೆಡೆ ಮಾಡಿಕೊಟ್ಟಿದೆ.
ನಿನ್ನೆಯೇ ದೆಹಲಿಗೆ ತೆರಳಿರುವ ಅವರು ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಸಂಸತ್ ಕಲಾಪ ಹಾಗೂ ಸದನದಲ್ಲಿ ಸರಣಿ ಮಸೂದೆಗಳು ಮಂಡನೆಯಾದ ಹಿನ್ನೆಲೆಯಲ್ಲಿ ನಾಯಕರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿಲ್ಲ. ಹೀಗಾಗಿ ಇಂದು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಕೂಡ ಮಣಿಪುರ ಹಿಂಸಾಚಾರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯ ಮೇಳೆ ಚರ್ಚೆಗಳು ನಡೆಯಲಿವೆ. ಇಂದು ಭೇಟಿಗೆ ಅವಕಾಶ ಸಿಕ್ಕರೆ ರಾಜ್ಯ ಬಿಜೆಪಿಯ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ವಿಪಕ್ಷ ನಾಯಕನ ಹುದ್ದೆಯ ಆಕಾಂಕ್ಷಿಯಾಗಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಇದರ ನೈತಿಕ ಹೊಣೆಯನ್ನು ಬೊಮ್ಮಾಯಿ ಹೊತ್ತುಕೊಂಡಿದ್ದಾರೆ. ಹೀಗಾಗಿ ವಿಪಕ್ಷ ನಾಯಕನ ಸ್ಥಾನ ಕೇಳುವುದು ಹೇಗೆ ಎಂಬು ಮುಜುಗರ ಬೊಮ್ಮಾಯಿ ಅವರನ್ನು ಕಾಡುತ್ತಿದೆ. ಹೀಗಾಗಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರನ್ನು ಆಯ್ಕೆ ಮಾಡುವಂತೆ ಮನವಿ ಮಾಡಲಿದ್ದಾರೆ.