ಹೈಕಮಾಂಡ್ ನಿರ್ಧಾರ ಖುಷಿ ಕೊಟ್ಟಿಲ್ಲ

ನವದೆಹಲಿ,ಮೇ.೧೮- ಸಹೋದರ ಹಾಗು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದ ಬಗ್ಗೆ ಸಂಸದ ಡಿಕೆ ಸುರೇಶ್ ಬೇಸರ ಹೊರ ಹಾಕಿದ್ದಾರೆ.ಪಕ್ಷದ ಹೈಕಮಾಂಡ್ ತೆಗೆದುಕೊಂಡ ನಿರ್ಧಾರ ಖುಷಿ ಕೊಟ್ಟಿಲ್ಲ ಆದರೆ ರಾಜ್ಯದ ಹಿತದೃಷ್ಟಿಯಿಂದ ಅನಿವಾರ್ಯವಾಗಿ ನಿರ್ಧಾರ ಒಪ್ಪಿಕೊಳ್ಳಬೇಕಾಯಿತು ಎಂದು ತಿಳಿಸಿದ್ದಾರೆ.ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಸುರೇಶ್, ಈಗ ಆಗಿರುವ ತೀರ್ಮಾನ ನನಗೆ ಪೂರ್ಣ ಸಂತೋಷವಾಗಿಲ್ಲ. ಆದರೆ ಕರ್ನಾಟಕದ ಹಿತ ದೃಷ್ಟಿಯಿಂದ ನಾವು ನಮ್ಮ ಬದ್ಧತೆ ಪೂರೈಸಲು ಬಯಸಿದ್ದೇವೆ ಈ ಕಾರಣಕ್ಕಾಗಿ ಒಪ್ಪಿಕೊಂಡಿದ್ದೇವೆ ಎಂದು ಹೇಳಿದ್ದಾರೆಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ವಿಶ್ವಾಸವಿದ್ದು ಇದೀಗ ಪಕ್ಷದ ಹೈಕಮಾಂಡ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಮನವೊಲಿಸಿದೆ ಇದು ನಿಜಕ್ಕೂ ಖುಷಿ ಕೊಟ್ಟಿಲ್ಲ ಆದರೂ ಅನಿವಾರ್ಯವಾಗಿ ಒಪ್ಪಿಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
ಸಹೋದರ ಡಿಕೆ ಶಿವಕುಮಾರ್ ಅವರು ಕೂಡ ರಾಜ್ಯದ ಜನರ ಹಿತದೃಷ್ಟಿಯಿಂದ ಪಕ್ಷದ ಹೈಕಮಾಂಡ್ ವಹಿಸಿದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.
ಈಗ ಆಗಿರುವ ಒಪ್ಪಂದ ಭವಿಷ್ಯದಲ್ಲಿ ಯಾವ ರೀತಿ ಅನುಷ್ಠಾನ ಆಗುತ್ತದೆ ಎನ್ನುವುದನ್ನು ನಾವು ಕಾದು ನೋಡುತ್ತೇವೆ ಎಂದು ಹೇಳುವ ಮೂಲಕ ಮಾರ್ಮಿಕವಾಗಿ ನುಡಿದಿದ್ದಾರೆ.
ಶುಭ ಹಾರೈಕೆ:
ಮುಖ್ಯಮಂತ್ರಿ ಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಯಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಇದೇ ಸಂದರ್ಭದಲ್ಲಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ