ಹೈಕೋರ್ಟ್ ಪೀಠದ ಆದೇಶ ಸ್ವಾಗತಾರ್ಹ

ಕಲಬುರಗಿ:ಜ.5:ಗುಂಡಾಗಿರಿ, ಅಪರಾಧಿಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಆಳಂದ ಪಟ್ಟಣದ ಮಹ್ಮದ್ ಫೀರ್ದೊಸ್ ಅರೀಪ್ ಅನ್ಸಾರಿಗೆ ಗುಂಡಾ ಕಾಯ್ದೆಯಡಿ ಬಂಧಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಯಶವಂತ ಗುರುಕರ್ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿರುವ ಕಲಬುರಗಿ ಹೈಕೋರ್ಟ್ ಪೀಠದ ಆದೇಶವನ್ನು ಆಳಂದ ಶಾಸಕ ಸುಭಾಷ ಆರ್ ಗುತ್ತೇದಾರ ಸ್ವಾಗತಿಸಿದ್ದಾರೆ.

ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು, ಅಪರಾಧಿಯ ವಿದ್ರೋಹಿ ಚಟುವಟಿಕೆ ನಿಯಂತ್ರಿಸಲು, ಸಮಾಜದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದರು ಹೈಕೋರ್ಟ್ ನೀಡಿರುವ ಈ ತೀರ್ಪು ಸ್ವಾಗತಾರ್ಹವಾಗಿದೆ ಎಂದು ತಿಳಿಸಿದ್ದಾರೆ.