ಹೈನೋದ್ಯಮಕ್ಕೆ ಹೆಚ್ಚಿನ ಆದ್ಯತೆ

ನವದೆಹಲಿ, ಫೆ.೧-ಹೈನುಗಾರಿಕೆ ರೈತರಿಗೆ ಹಾಲು ಉತ್ಪಾದನೆ ಹೆಚ್ಚಳಕ್ಕೆ ಸಹಕಾರ ಯೋಜನೆ.ಜತೆಗೆ, ಡೇರಿಗೆ ಮೂಲಭೂತ ಸೌಕರ್ಯಗಳ ಹೆಚ್ಚಳ ಮಾಡಲಾಗುವುದು
ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
ಮಧ್ಯಂತರ ಬಜೆಟ್ ಮಂಡಿಸಿದ ಅವರು, ರೈತರಿಗೆ ಆಧುನಿಕ ತಂತ್ರಜ್ಞಾನದ ಸಹಾಯಕ್ಕಾಗಿ ನ್ಯಾನೋ ಯೂರಿಯಾ ಎಲ್ಲಾ ವಲಯಗಳಿಗೆ ವಿಸ್ತರಣೆ ಮಾಡಲಾಗಿದೆ. ಆತ್ಮನಿರ್ಭರ್ ಆಯಿಲ್ ಸೀಡ್ ಅಭಿಯಾನ ಆರಂಭಿಸಲಾಗಿದೆ. ಎಣ್ಣೆಬೀಜಗಳಲ್ಲಿ ಆತ್ಮನಿರ್ಭರತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ಹೈನುಗಾರಿಕೆ ರೈತರಿಗೆ ಹಾಲು ಹೆಚ್ಚಳಕ್ಕೆ ಯೋಜನೆ. ಡೇರಿಗೆ ಮೂಲಭೂತ ಸೌಕರ್ಯಗಳ ಹೆಚ್ಚಳ ಮಾಡಲಾಗುತ್ತಿದೆ ಎಂದೂ ಅವರು ಉಲ್ಲೇಖಿಸಿದರು.

ಇನ್ನೂ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ನಾವು ಪ್ರತಿ ವರ್ಷ ೧೧.೮ ಕೋಟಿ ರೈತರಿಗೆ ನೇರ ಆರ್ಥಿಕ ನೆರವು ನೀಡುತ್ತೇವೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ೪ ಕೋಟಿ ರೈತರು ಬೆಳೆ ವಿಮೆ ನೆರವು ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಶಿಕ್ಷಣ ವ್ಯವಸ್ಥೆಯ ಮೂಲಕ ಹಲವು ಬದಲಾವಣೆಗಳನ್ನು ತಂದಿದ್ದೇವೆ. ನಾವು ೩೦೦೦ ಐಟಿಐಗಳು, ಏಳು ಐಐಟಿಗಳು, ೧೮ ಐಐಐಟಿಗಳು, ೧೫ ಏಮ್ಸ್ ಮತ್ತು ೩೮೦ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದ್ದೇವೆ. ಕಳೆದ ಹತ್ತು ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ ಶೇಕಡಾ ೨೮ ರಷ್ಟು ಹೆಚ್ಚಾಗಿದೆ ಎಂದರು.