ಹೈ-ಕ ದಲ್ಲಿ ಬಿಜೆಪಿ ಅಲ್ಲಾಡಿಸಲು ಆಗಲ್ಲ;ಚಿಂಚನಸೂರ್

ಬೆಂಗಳೂರು, ಜು.೩೧- ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ಬಿಜೆಪಿಯನ್ನು ಯಾರು ಅಲ್ಲಾಡಿಸಲು ಆಗುವುದಿಲ್ಲ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ.
ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಬಿಜೆಪಿ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಇಂದು ಚಿಂಚನಸೂರ್ ಅವರು ಆರ್‌ಟಿ ನಗರ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ೫ ಬಾರಿ ಗೆಲುವು ಸಾಧಿಸಿದ್ದೇನೆ. ಈ ಭಾಗದಲ್ಲಿ ಕೋಲಿ ಸಮಾಜ ಶೇ. ೪೫ರಷ್ಟಿದೆ. ತಮ್ಮನ್ನು ಗುರುತಿಸಿ ಪಕ್ಷ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿದೆ ಎಂದು ಹೇಳಿದರು.
ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ಬಿಜೆಪಿ ಅತ್ಯಂತ ಬಲಿಷ್ಠವಾಗಿದೆ. ಮುಂದಿನ ಬಾರಿ ಗುರ್‌ಮಿಟ್ಕಲ್ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದರು. ಪ್ರಿಯಾಂಕಖರ್ಗೆ ಅವರ ವಿರುದ್ಧ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಅವರ ಕತೆಯಲ್ಲೆ ಇನ್ನು ಮುಗಿಯಿತು. ಮುಂದೆ ನೋಡುತ್ತೀರಿ. ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ಬಿಜೆಪಿ ಇನ್ನಷ್ಟು ಬಲಿಷ್ಠವಾಗಲಿದೆ ಎಂದು ಅವರು ಹೇಳಿದರು.