ಹೊಂದಾಣಿಕೆ ರಾಜಕಾರಣ ಇಲ್ಲ : ಸಲೀಂ ಅಹ್ಮದ

ಹುಬ್ಬಳ್ಳಿ, ನ 25: ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಯೊಂದಿಗೆ ಯಾವುದೇ ಹೊಂದಾಣಿಕೆ ರಾಜಕಾರಣ ಮಾಡುತ್ತಿಲ್ಲ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸುತ್ತ ಈ ಹಿಂದೆಯೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಒಬ್ಬರೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿತ್ತು. ಅದರಂತೆ ಈ ಬಾರಿಯೂ ಒಬ್ಬರೇ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಿದೆ. ಬಿಜೆಪಿಯೊಂದಿಗೆ ಯಾವುದೇ ಮಿಲಾಪಿ ಕುಸ್ತಿ ಇಲ್ಲ ಎಂದರು.
ರಾಜ್ಯ ಹಾಗೂ ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಸರ್ಕಾರದ ಜನವಿರೋಧಿ ನೀತಿಗೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದರು.
ತಾವು ಪ್ರಥಮ ಪ್ರಾಶಸ್ತ್ಯದ ಮತದೊಂದಿಗೆ ಗೆದ್ದು ಬರಲಿರುವುದಾಗಿ ಅವರು ತಿಳಿಸಿದರು.