ಹೊಟ್ಟೆ ನೋವು ತಾಳದೆ ಗೃಹಿಣಿ ಆತ್ಮಹತ್ಯೆ

ಕಲಬುರಗಿ,ಜು.30-ಹೊಟ್ಟೆನೋವು ತಾಳದೆ ಗೃಹಿಣಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಗತ್ ಬಡಾವಣೆಯಲ್ಲಿ ನಡೆದಿದೆ.
ಮಹಾದೇವಿ ಶರಣಬಸಪ್ಪ ಗುಡ್ಡೋಡಗಿ ಎಂಬ ಗೃಹಿಣಿಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಕಳೆದ ಎರಡು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹೊಟ್ಟೆ ನೋವು ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.