ಹೊಟ್ಟೆ ನೋವು ತಾಳದೆ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಲಬುರಗಿ,ಜು.17-ಹೊಟ್ಟೆ ನೋವು ತಾಳದೆ ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೀಮಳ್ಳಿ ಗ್ರಾಮದಲ್ಲಿ ನಡೆದಿದೆ.
ವೀರಣ್ಣ ಉಪ್ಪಿನ್ (50) ಆತ್ಮಹತ್ಯೆ ಮಾಡಿಕೊಂಡವರು.
ಕೆಲವು ವರ್ಷಗಳಿಂದ ವೀರಣ್ಣ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಎಲ್ಲಾ ಕಡೆ ತೋರಿಸಿದ್ದರೂ ನೋವು ಕಡಿಮೆಯಾಗಿರಲಿಲ್ಲ. ಜು.12 ರಂದು ಪತ್ನಿ ಕೆಲಸಕ್ಕೆ ಹೋದ ವೇಳೆ ಕ್ರಿಮಿನಾಶಕ ಔಷಧ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪತ್ನಿ ಗೌರಮ್ಮ ಉಪ್ಪಿನ್ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ. ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.