ಹೊನ್ನಕಿರಣಗಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಕೊಲೆ

ಕಲಬುರಗಿ,ಏ.17-ಕ್ಷುಲ್ಲಕ ಕಾರಣಕ್ಕೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಕಿರಣಗಿ ಗ್ರಾಮದಲ್ಲಿ ಇಂದು ನಡೆದಿದೆ.
ಈರಣ್ಣ ಬಡಿಗೇರ್ (40) ಎಂಬಾತನನ್ನು ನಾಗಯ್ಯ ಶಿವಯ್ಯ ಮಠಪತಿ (45) ಎಂಬಾತನೆ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಇಂದು ಬೆಳಿಗ್ಗೆ 7.30ರ ಸುಮಾರಿಗೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದು ಫರಹತಾಬಾದ್ ಪಿಐ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.