ಹೊನ್ನಳ್ಳಿ ತಾಂಡಾದಲ್ಲಿ ಕಾನೂನು ಅರಿವು


(ಸಂಜೆವಾಣಿ ವಾರ್ತೆ)
ಬಳ್ಳಾರಿ, ನ.10: ತಾಲೂಕಿನ ಹಲಕುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಳ್ಳಿ ತಾಂಡ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘ ಮತ್ತು  ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಇಂದು  ಹಮ್ಮಿಕೊಳ್ಳಲಾಗಿತ್ತು. 
ಕಾರ್ಯಕ್ರಮದಲ್ಲಿ ಜೆಸಿಎಂ ನ್ಯಾಯಾಧೀಶ  ಬೀರಪ್ಪ ಕಂಬಳಿ    ಅವರು ಭಾಗವಹಿಸಿದ್ದರು.  ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಆರ್. ಮಲ್ಲಿಕಾರ್ಜುನಗೌಡ,  ಉಪಾಧ್ಯಕ್ಷರು ಸರ್ವ ಸದಸ್ಯರು, ಆಶಾ ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು,  ಮಕ್ಕಳು, ಗ್ರಾಮಸ್ಥರು.  ಗ್ರಾಮ ಪಂಚಾಯಿತಿ, ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ತಾಂಡಾದ ಜನತೆಗೆ ಸರ್ಕಾರ ಬಡ ಜನರಿಗೆ ನ್ಯಾಯಾಲಯದಲ್ಲಿ ಉಚಿತವಾಗಿ ನೀಡುವ ಕಾನೂನಿ ನೆರವಿನ ಬಗ್ಗೆ ತಿಳಿಸಲಾಯಿತು.