ಹೊನ್ನಾಳಿಯಲ್ಲಿ ಕೋಟಿ ವೆಚ್ಚದಲ್ಲಿ ಆಕ್ಸಿಜನ್ ಘಟಕ ನಿರ್ಮಾಣ

ಹೊನ್ನಾಳಿ.ಮೇ.೧೬ ; ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಉತ್ಪಾದಕ ಘಟಕವನ್ನು ಸರ್ಕಾರ ಮಂಜೂರು ಮಾಡಿದ್ದು, ಸದ್ಯದಲ್ಲೇ ಆಸ್ಪತ್ರೆಯ ಆವರಣದಲ್ಲಿ ಘಟಕ ತಲೆ ಎತ್ತಲಿದೆ ಎಂದು ಸಿ.ಎಂ.ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ಅಂಬೇಡ್ಕರ್ ಭವನದಲ್ಲಿರುವ ಲಕಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು ಅಲ್ಲಿ ಕೋವ್ಯಾಕ್ಸಿನ್ ಕೊರತೆ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕರೆ ಮಾಡಿ ದಾವಣಗೆರೆಯಿಂದ 150 ಕೋವ್ಯಾಕ್ಸಿನ್ ಲಸಿಕೆ ತರಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಎರಡನೇ ಡೋಸ್ ಲಸಿಕೆ ನೀಡುವ ವ್ಯವಸ್ಥೆ ಮಾಡಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಆಕ್ಸಿಜನ್ ಘಟಕ ನಿರ್ಮಾಣ ಮಾಡಲು ಸರ್ಕಾರ ಮಂಜೂರಾತಿ ನೀಡಿದ್ದು ಈಗಾಗಲೇ 82 ಲಕ್ಷ ಹಣ ಬಿಡುಗಡೆ ಯಾಗಿದ್ದು ಸದ್ಯದಲ್ಲೇ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ತಲೆ ಎತ್ತಲಿದೆ ಎಂದರು.ಆಕ್ಸಿಜನ್ ಘಟಕದಿಂದ ನೂರು ಹಾಸಿಗೆಗೆ ಆಕ್ಸಿನ್ ಪೂರೈಕೆ ಮಾಡ ಬಹುದಾಗಿದ್ದು, ಇದು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಜನರಿಗೆ ಸಂತೋಷದ ವಿಷಯ ಎಂದರು.ಕಳೆದ ವಾರವಷ್ಟೇ ಬೆಂಗಳೂರಿನಲ್ಲಿ ಹೊನ್ನಾಳಿ ತಾಲೂಕಿಗೆ ಆಕ್ಸಿಜನ್ ಘಟಕ ಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದೆ,ನನ್ನ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ತ್ವರಿತವಾಗಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಮಂಜೂರು ನೀಡಿ ಹಣ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿಗಳು ಹಾಗೂ ಕೆಆರ್‌ಡಿಎಲ್ ನ ಅಧ್ಯಕ್ಷ ರುದ್ರೇಶ್ ಅವರಿಗೆ ಧನ್ಯವಾದ ತಿಳಿಸಿದರು.ಪುರಸಭಾಧ್ಯಕ್ಷ ಕೆ.ವಿ.ಶ್ರೀಧರ್, ಪಿಎಸೈ ಬಸವನಗೌಡ ಬಿರಾದರ್,ಬಿಜೆಪಿ ಮುಖಂಡರಾದ ಮಹೇಂದ್ರಗೌಡ,ನೆಲಹೊನ್ನೆ ಮಂಜುನಾಥ್ ಸೇರಿದಂತರೆ ಮತ್ತೀತರರಿದ್ದರು.