ಹೊನ್ನಾಳಿಯಲ್ಲಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಏ.೧೧ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಅವರು ಇಂದು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಪ್ರಚಾರ ಕೈಗೊಂಡಿದ್ದು, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ, ಉಭಯ ಕುಶಲೋಪರಿ ವಿಚಾರಿಸಿದರು. ಬಳಿಕ ಚುನಾವಣಾ ಪ್ರಚಾರ. ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು. ಹೊನ್ನಾಳಿಗೆ ತೆರಳುವ ಮಾರ್ಗ ಮಧ್ಯೆ ಮಸಡಿ ಗ್ರಾಮಸ್ಥರು ಗಾಯಿತ್ರಿ ಸಿದ್ದೇಶ್ವರ್ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡರು. ಗಾಯಿತ್ರಿ ಸಿದ್ದೇಶ್ವರ್ ಅವರು ಮಸಡಿ ಗ್ರಾಮದಲ್ಲಿ ಮತಯಾಚನೆ ಮಾಡಿದರು. ಈ ವೇಳೆ ಗ್ರಾಮದ ಕೆಲ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮಹೇಶ್, ಹನುಮಂತಪ್ಪ, ರಾಜಣ್ಣ ಸೇರಿದಂತೆ ಗ್ರಾಮದ ಬಿಜೆಪಿ ಮುಖಂಡರು ಇದ್ದರು.