ಹೊರಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಸರ್ಕಾರ ಸ್ಪಂದನೆ: ಸ್ವಾಗತ

ವಾಡಿ: ಜ.2: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿದ್ಯಾರ್ಥಿ ವಸತಿ ನಿಲಯಗಳು, ವಸತಿ ಶಾಲೆಗಳು ಮತ್ತು ವಸತಿ ಕಾಲೇಜುಗಳ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರಾದ ಅಡುಗೆಯವರು ಅಡುಗೆ ಸಹಾಯಕರು, ಕಾವಲುಗಾರರು, ಸ್ವಚ್ಛತೆ ಮತ್ತಿತರ ಕಾರ್ಮಿಕರಿಗೆ ಶಾಸನ ಬದ್ಧ ಸೌಲಭ್ಯಗಳನ್ನು ಕಟ್ಟುನಿಟ್ಟಾಗಿ ನೀಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದನ್ನು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯಗಳ ಕಾರ್ಮಿಕರ ಸಂಘದ ತಾಲ್ಲೂಕ ಅಧ್ಯಕ್ಷ ಶರಣು ಹೇರೂg ಸ್ವಾಗತಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯ ಸಮ್ಮೇಳನದಲ್ಲಿ ಎತ್ತಲಾದ ಕನಿಷ್ಠ ವೇತನ ಪಾವತಿ, ವಾರದ ರಜೆ, ಎಂಟು ಗಂಟೆಗಳ ದುಡಿಮೆ ಅವಧಿ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಾರ್ಮಿಕರ ಸಂಖ್ಯೆಗೆ ಹೆಚ್ಚಿಸುವುದು ಹಾಗೂ ಇಪಿಎಫ್ ಹಾಗೂ ಇಎಸ್‍ಐ ಮತ್ತಿತರ ಸೌಕರ್ಯಗಳನ್ನು ನೀಡದ ಗುತ್ತಿಗೆ ಏಜೆನ್ಸಿ ಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎನ್ನುವ ನಮ್ಮ ಸಂಘದ ಬೇಡಿಕೆಗಳನ್ನು ಒಪ್ಪಿಕೊಂಡ ರಾಜ್ಯ ಸರ್ಕಾರ ಮತ್ತು ಇಲಾಖೆ ಯು ಈ ಸಂಬಂಧ ಡಿಸೆಂಬರ 28 ರಂದು ಸುತ್ತೋಲೆ ಹೊರಡಿಸಿರುವುದು ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಾಲೂಕ ಕಾರ್ಯದರ್ಶಿ ಸಂತೋಷ ದೊಡ್ಡಮನಿ ತಿಳಿಸಿದರು.