ಹೊರಗುತ್ತಿಗೆ ನೌಕರರಿಗೆ ಇಎಸ್‍ಐ ಮತ್ತು ಫಿಎಫ್ ಸೇರಿ ಎಲ್ಲಾ ಸೌಲಭ್ಯಗಳು ಸಿಗುವಂತಾಗಬೇಕು :ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ. ಜು. 12: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರಿಗೆ ಇಎಸ್‍ಐ, ಫಿಎಫ್ ಸೇರಿದಂತೆ ಅವರಿಗೆ ಸಿಗಬೇಕಾದ ಇತರೆ ಎಲ್ಲಾ ಸೌಲಭ್ಯಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೊಡಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಗೊಂಡ ಹೊರಗುತ್ತಿಗೆ ಕಾರ್ಮಿಕರಿಗೆ ಅನ್ವಯವಾಗುವ ಕಾರ್ಮಿಕ ಕಾನೂನುಗಳು ಮತ್ತು ಕಾರ್ಮಿಕರುಗಳಿಗೆ ನೀಡಬೇಕಿರುವ ಸೌಲಭ್ಯಗಳ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಹೊರಗುತ್ತಿಗೆ ನೌಕರರಿಗೆ ಸಿಗಬೇಕಾದ ಸಹಾಯ ಸೌಲಭ್ಯಗಳ ಕುರಿತು ತಿಳಿವಳಿಕೆ ಹೇಳುವ ಸಂಬಂದ ಒಳ್ಳೆಯ ಕಾರ್ಯಾಗಾರವನ್ನು ಹಮ್ಮಿಕೊಂಡಿರುವದು ಅಭಿನಂದನೀಯವಾಗಿದೆ ಇದರ ಕುರಿತು ತಿಳಿಸಲು ಸಂಪನ್ಮೂಲ ವ್ಯಕ್ತಿಗಳು ಬಂದಿದ್ದು ಇದರ ಬಗ್ಗೆ ಚೆನ್ನಾಗಿ ತಿಳಿದುಕೊಳ್ಳಬೇಕೆಂದರು.

ತಮ-ತಮ್ಮ ಇಲಾಖೆಗಳಲ್ಲಿ ಹೊರ ಗುತ್ತಿಗೆ ನೌಕರರನ್ನು ತೆಗೆದುಕೊಳ್ಳುವಾಗ ಅನುಮತಿ ಇರುವಷ್ಟು ಹುದ್ದೆಗಳನ್ನು ತೆಗೆದುಕೊಳ್ಳುಬೇಕು ಮತ್ತು ಕಾನೂನು ಚೌಕಟ್ಟಿನಲ್ಲಿ ತಾವು ಕಾರ್ಯನಿರ್ವಹಿಸಿದರೆ ಯಾವುದೇ ಸಮಸ್ಯೆಗಳಾಗುವದಿಲ್ಲ ಈ ಕಾರ್ಯಾಗಾರದ ಸದುಪಯೋಗವನ್ಮು ಎಲ್ಲರೂ ಪಡೆದುಕೊಳ್ಳಬೇಕೆಂದರು.

ಉಪ ಕಾರ್ಮಿಕ ಆಯುಕ್ತ ಕಲಬುರಗಿ ಪ್ರಾದೇಶಿಕ ವೆಂಕಟೇಶ ಅಪ್ಪಯ್ಯ ಶಿಂದಿಹಟ್ಟಿ ಮಾತನಾಡಿ 20 ಕ್ಕಿಂತ ಹೆಚ್ಚು ಜನರು ಕೆಲಸ ಮಾಡುವ ಸ್ಥಳಗಳಲ್ಲಿ ಕಾರ್ಮಿಕ ಕಾಯ್ದೆ ಅನ್ವಯವಾಗುತ್ತದೆ. 24 ಕಾರ್ಮಿಕ ಆesigಟಿiಟಿg ಹೊರ ಗುತ್ತಿಗೆ ನೌಕರರಿಗೆ ಅನ್ವಯವಾಗುತ್ತವೆ ಎಂದರು.

ಕಾರ್ಮಿಕ ಇಲಾಖೆಯ ಪ್ರಕಾರ ಈ ತಿಂಗಳ ಸಂಬಳ ಮುಂದಿನ ತಿಂಗಳ 7 ತಾರೀಖಿನ ಒಳಗೆ ಕೊಡುವದಾಗಿದೆ. ಹೊರ ಗುತ್ತಿಗೆ ನೌಕರರಿಗೆ ಸಕಾಲದಲ್ಲಿ ಸೌಲಭ್ಯಗಳನ್ನು ನೀಡದಿದ್ದರೆ ಅದು ಕ್ರೀಮಿನಲ್ ವಾಯಲೇಷನ್ ಆಗುತ್ತದೆ ಮತ್ತು 3 ತಿಂಗಳ ಜೈಲುವಾಸ 1000 ರೂ. ದಂಡ ಹಾಗೂ ದಿನಕ್ಕೆ 100 ರೂ. ದಂಡ ಹಾಕಲಾಗುತ್ತದೆ ಎಂದರು.

ಈ ಕಾರ್ಯಾಗಾರದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಬಡಿಗೇರ. ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅವಿನಾಶ. ಇಎಸ್‍ಐ. ಮತ್ತು ಫಿಎಫ್ ಕುರಿತು ಮಾಹಿತಿ ನೀಡಿದ ಸಂಪನ್ಮೂಲ ವ್ಯಕ್ತಿಗಳಾದ ಆದಿತ್ಯ. ಮದನ ಕುಲಕರ್ಣಿ. ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ಸಂಘದ ಕಾರ್ಯದರ್ಶಿ ಅರ್ಜುನ ಸಿತಾಳಗೇರ. ಗೌರಿ ಶಂಕರ ಪರತಾಪೂರೆ. ಹಾಗೂ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.