ಹೊರ ರಾಜ್ಯದಲ್ಲಿ ರಾಜ್ಯದ ಯಾತ್ರಾರ್ಥಿಗಳ ಮೂಲಸೌಕರ್ಯಕ್ಕೆ ವಿಶೇಷ ಅನುದಾನ: ಜೊಲ್ಲೆ

ಬೆಂಗಳೂರು, ಆ.3- ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ರಾಜ್ಯ ಸರ್ಕಾರ ವಿಶೇಷ ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನ ನೀಡಿದ್ದಾರೆ ಎಂದು ತಿಳಿಸಿದ್ದಾರೆ

ಅಧಿಕೃತ ಆದೇಶ ಪ್ರಕಟ:

ಹೊರ ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಹಾಗೂ ಅಭಿವೃದ್ದಿಗೂ ವಿಶೇಷ ಆದ್ಯತೆ ನೀಡಿದ್ದಾರೆ. ಶಬರಿಮಲೆ, ಮಂತ್ರಾಲಯ ಹಾಗೂ ಪಂಡರಾಪುರದ ಕರ್ನಾಟಕ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ದಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದರು ಎಂದು ತಿಳಿಸಿದ್ದಾರೆ.

.ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಅತಿಹೆಚ್ಚು ಅನುದಾನ ನೀಡುವ ಮೂಲಕ ಇಲಾಖೆಯ ಅಭಿವೃದ್ದಿಗೆ ಹೆಚ್ಚಿನ ಸಹಕಾರ ನೀಡುತ್ತಿರುವುದಕ್ಕೆ ನಾನು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂಪಾಯಿಗಳ ಬೃಹತ್‌ ಅನುದಾನವನ್ನು ಕಳೆದ ವರ್ಷ ನೀಡಲಾಗಿತ್ತು. ಕರ್ನಾಟಕ ಭವನದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಆಂಧ್ರಪದ್ರೆಶದ ಶ್ರೀಶೈಲದಲ್ಲಿರುವ ನೂತನ ಕರ್ನಾಟಕ ಛತ್ರದ ನಿರ್ಮಾಣಕ್ಕಾಗಿ 85 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿಗಳ ಈಗಾಗಲೇ ಮಂಜೂರು ಮಾಡಿದ್ದು, ಸದ್ಯದಲ್ಲಿಯೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದಿದ್ದಾರೆ.