ಹೊಸಪೇಟೆಯಲ್ಲಿ ಸರಳವಾಗಿ ವಿಶ್ವಮಾನವ ದಿನಾಚರಣೆ

ಹೊಸಪೇಟೆ,ಡಿ.30: ಕೋವಿಡ್-19 ಹಿನ್ನೆಲೆಯಲ್ಲಿ ಹೊಸಪೇಟೆ ತಹಸೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನದ ಪ್ರಯುಕ್ತ ವಿಶ್ವಮಾನವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು
ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು ಭಾರತದ ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಿದ ಶ್ರೇಷ್ಠ ಸಾಹಿತಿಗಳಲ್ಲಿ ಕುವೆಂಪುರವರು ಒಬ್ಬರಾಗಿದ್ದಾರೆ. ಈ ಪರಂಪರೆಯನ್ನು ಯುವ ಸಾಹಿತಿಗಳಲ್ಲಿ ಮತ್ತು ಮಕ್ಕಳಲ್ಲಿ ಮೂಡಿಸಿದರೆ, ಯುವಕರು ನಮ್ಮ ಭವ್ಯ ಭಾರತದ ಶ್ರೀಮಂತ ಪರಂಪರೆಯನ್ನು ವಿಶ್ವಮಟ್ಟದಲ್ಲಿ ಬೆಳೆಸಬೇಕು ಎಂದರು. ತಹಶೀಲ್ದಾರರಾದ ಎಂ.ಎನ್.ಮಠದ್ ಶಿರಸ್ತೇದಾರ್ ರಮೇಶ್, ಶ್ರೀಧರ್, ತಾಲೂಕು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.