ಹೊಸಪೇಟೆ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆಜ 21 ರಂದು ಚುನಾವಣೆ

(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ ಜ 14 : ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಜ 21 ರಂದು ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ.

ಜಿಲ್ಲಾಧಿಕಾರಿ ಅನಿವೃದ್ದ ಶ್ರವಣ ಅವರ ಸೂಚನೆಯಂತೆ ಸಹಾಯಕ ಆಯುಕ್ತ ಸಿದ್ರಾಮೇಶ್ವರ ಅವರು ಆದೇಶ ಹೊರಡಿಸಿದ್ದಾರೆ.
ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮನ್ಯ ಕ್ಕೆ ಮೀಸಲಿದೆ.

ಜ 2 1 ರಂದು ಬೆಳಿಗ್ಗೆ 11 ಗಂಟೆಯಿಂದ ನಾಮಪತ್ರಗಳ ಸಲ್ಲಿಕೆ ಮಧ್ಯಾಹ್ನ 1 ರ ವರಗೆ ನಂತರ ಪರಿಶೀಲನೆ. ನಂತರ 2.10 ಕ್ಕೆ ಸದಸ್ಯರ ಸಭೆ ನಡೆಸಿ ಅಗತ್ಯ ಬಿದ್ದರೆ ಚುನಾವಣೆ ನಡೆಸಲಿದೆಂದು ತಿಳಿಸಿದೆ.