ಹೊಸಹಳ್ಳಿ ಚೆಕ್ ಪೋಸ್ಟ್ ಗೆ ಎಸ್ಪಿ  ಶ್ರೀಹರಿಬಾಬು ಭೇಟಿ, ವೀಕ್ಷಣೆ.


ಸಂಜೆವಾಣಿ ವಾರ್ತೆ
ಕೂಡ್ಲಿಗಿ.ಏ. 15 : –  ತಾಲೂಕಿನ ಕಾನಹೊಸಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸ್ಥಾಪಿಸಿರುವ ಚುನಾವಣೆಗೆ ಸಂಬಂದಿಸಿದ ಚೆಕ್ ಪೋಸ್ಟ್ ಗೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್‌.ಶ್ರೀಹರಿಬಾಬು ಶುಕ್ರವಾರ ಧಿಡೀರ್ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯ  ವೀಕ್ಷಣೆ  ನಡೆಸಿದರು.
ವಿಧಾನಸಭಾ ಚುನಾವಣೆ ಹಿನ್ನೆಲೆ ಸ್ಥಾಪಿಸಿರುವ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳ ಕಾರ್ಯವೈಖರಿ ವೀಕ್ಷಿಸಿ  ಎಸ್ಪಿ ಶ್ರೀಹರಿಬಾಬು ಮಾತನಾಡಿ, ಚೆಕ್ ಪೋಸ್ಟ್ ಗೆ ನಿಯೋಜಿಸಿರುವ  ಅಧಿಕಾರಿಗಳು ಮತ್ತು ಸಿಬ್ಬಂದಿಯು ಜಿಲ್ಲೆಗೆ ಪ್ರವೇಶಿಸುವ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಅದಲ್ಲದೆ, ವಾಹನಗಳನ್ನು ಅಧಿಕಾರಿಗಳು ತಪಾಸಣೆ ಮಾಡುವುದನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕೊಟ್ಟೂರು ಸಿಪಿಐ ವೆಂಕಟಸ್ವಾಮಿ, ಪಿಎಸ್ ಐ ಎರಿಯಪ್ಪ ಅಂಗಡಿ ಸೇರಿ ಪೊಲೀಸರು ಹಾಗೂ ಚೆಕ್ ಪೋಸ್ಟ್ ಸಿಬ್ಬಂದಿ  ಇದ್ದರು.