ಹೊಸ ಅಪರಾಧಿಕ ಕಾನೂನುಗಳ ಕುರಿತು ಉಪನ್ಯಾಸ

RemasterDirector_1a5c03258

ಕಲಬುರಗಿ,ಮೇ 31: ಪೆÇಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ 2024 ಜುಲೈ 1 ರಿಂದ ಜಾರಿಗೆ ಬರುತ್ತಿರುವ ಹೊಸ ಅಪರಾಧಿಕ ಕಾನೂನುಗಳ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಪ್ರಾಂಶುಪಾಲ ಡೆಕ್ಕಾ ಕಿಶೋರ್ ಬಾಬು ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಗಾರದಲ್ಲಿ ಎಸ್ಪಿ ಹಕೆ ಅಕ್ಷಯ್ ಮಚ್ಚಿಂದ್ರ ಮತ್ತುಗ್ರಾಮೀಣ ಉಪ ವಿಭಾಗದ ಎ.ಎಸ್.ಪಿ ಬಿಂದು ಮಣಿ ಆರ್.ಎನ್, ಅಪರ ಪೆÇಲೀಸ್ ಅಧೀಕ್ಷಕ ಶ್ರೀನಿಧಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆ, ಕಲಬುರಗಿ ನಗರ, ಬೀದರ್ ಜಿಲ್ಲೆ, ಯಾದಗಿರಿ ಜಿಲ್ಲೆಯ ಎಸ್ ಪಿ ಹುದ್ದೆಯಿಂದ ಪಿಸಿ ಹುದ್ದೆಯವರೆಗಿನ ಒಟ್ಟು 800 ಅಧಿಕಾರಿ ಸಿಬ್ಬಂದಿಗಳಿಗೆ ಜುಲೈ 1 ನೇ ತಾರೀಖಿನಿಂದ ಜಾರಿಗೆ ಬರುತ್ತಿರುವ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ, ಭಾರತೀಯ ಸಾಕ್ಷ್ಯ ಅಧಿನಿಯಮ, ವಿಷಯಗಳ ಕುರಿತು ರಾಜಶೇಖರ ಶೆಟ್ಟಿ ಮತ್ತು ಗಿರೀಶ್ .ಪಿ. ಸರ್ ದೇಶಪಾಂಡೆ ಅವರು ಉಪನ್ಯಾಸ ನೀಡಿದರು.
ಪೆÇಲೀಸ್ ತರಬೇತಿ ಮಹಾವಿದ್ಯಾಲಯದ ವತಿಯಿಂದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರೀಕ ಸುರಕ್ಷತಾ ಸಂಹಿತೆ, ಭಾರತೀಯ ಸಾಕ್ಷ್ಯ ಅಧಿನಿಯಮ, ವಿಷಯದ ಕುರಿತು ಸುಮಾರು ಐದು ಸಾವಿರಕ್ಕೂ ಹೆಚ್ಚು ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಿ ಜಾಗೃತಿ ಮೂಡಿಸಲು ಕಲಬುರಗಿ ಜಿಲ್ಲೆ, ಕಲಬುರಗಿ ನಗರ, ಬೀದರ್ ಜಿಲ್ಲೆ, ಯಾದಗಿರಿ ಜಿಲ್ಲೆಯ ಎಲ್ಲಾ ಠಾಣಾಧಿಕಾರಿಗಳಿಗೆ ನೀಡಲಾಯಿತು.