ಹೊಸ ಗ್ರಂಥಾಲಯ ಕಟ್ಟಡ ಪರಿಶೀಲಿಸಿದ ಜಿಲ್ಲಾಧಿಕಾರಿ

ವಿಜಯಪುರ ಜೂ.2: ನಗರದ ಗಾಂಧಿ ವೃತ್ತದ ರೇಡಿಯೋ ಮೈದಾನದಲ್ಲಿ ನಿರ್ಮಾಣಗೊಂಡ ಹೊಸ ಸಾರ್ವಜನಿಕ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ನಿರ್ಮಿತಿ ಕೇಂದ್ರದ ವತಿಯಿಂದ ಸುಮಾರು 90.5 ಲಕ್ಷ ರೂಗಳಲ್ಲಿ ನಿರ್ಮಾಣಗೊಂಡ ಗ್ರಂಥಾಲಯದಲ್ಲಿ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಕಲ್ಪಿಸಿರುವ ಆಸನಗಳ ವ್ಯವಸ್ಥೆ ವಿಕ್ಷೀಸಿದರು. ಚುನಾವಣಾ ನೀತಿ ಸಂಹಿತೆ ಮುಗಿದ ಮೇಲೆ ಆದಷ್ಟು ಬೇಗ ಕಟ್ಟಡವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕರಾದ ಅಜಯಕುಮಾರ ಅವರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ವೇಳೆ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದರು.