ಹೊಸ ವರ್ಷಾಚರಣೆಗೆ ಕಠಿಣ ನಿಯಮ

ಬೆಂಗಳೂರು ,ಡಿ.೨೫- ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಆದೇಶ ವಾಪಸ್ ಪಡೆದಿದ್ದರೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿತ್ತವೆ ಎಂದು ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ತರುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಹೊಸ ವರ್ಷದ ದಿನ ಹಾಗೂ ಇಂದಿನ ದಿನ ಕಠಿಣ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದೇನೆ. ಹೀಗಾಗಿ ಕಠಿಣ ನಿಯಮಗಳು ಜಾರಿಗೆ ಬರಲಿವೆ ಎಂದು ಹೇಳಿದರು.
ರಾತ್ರಿ ಕರ್ಫ್ಯೂ ಬಗ್ಗೆ ಬುಧವಾರ ಹೊರಡಿಸಿದ್ದ ಆದೇಶವನ್ನು ೨೪ ತಾಸುಗಳಲ್ಲಿ ಸರ್ಕಾರ ವಾಪಸ್ ಪಡೆದುಕೊಂಡಿತ್ತು. ಇದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಒಳಗಾಗಿತ್ತು.