ಕೋವಿಡ್ ಭಯಬೇಡ ಜಾಗರೂಕರಾಗಿ

ಕೊರೊನಾ ಸೋಂಕು ನಿಯಂತ್ರಣ ಕುರಿತು ಕೇಂದ್ರ ಆರೋಗ್ಯ ಸಚಿವ ನಡೆಸಿದ ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಹಾಗೂ ಹಿರಿಯ
ಅಧಿಕಾರಿಗಳು ಪಾಲ್ಗೊಂಡಿದ್ದರು.

ನವದೆಹಲಿ,ಡಿ,೨೦- ದೇಶಾದ್ಯಂತ ಕೋವಿಡ್ ರೂಪಾಂತರ ತಳಿಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಭಯಪಡಬೇಡಿ ಬದಲಾಗಿ ಜಾಗರೂಕರಾಗಿ ಕಟ್ಟೆಚ್ಚರ ವಹಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಎಲ್ಲಾ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕುರಿತು ಅಣಕು ಪ್ರರ್ದನ ನಡೆಸಿ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವೀಯ, ಎಲ್ಲಾ ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ ನಿಡಿದ್ದಾರೆ
ಕ್ರಿಸ್‌ಮಸ್, ಹೊಸವರ್ಷ ಮತ್ತು ಹಬ್ಬಗಳಿಗೆ ಮುಂಚಿತವಾಗಿ ಚಳಿಗಾಲದ ಅವಧಿಯಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೀಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ದೇಶದಲ್ಲಿ ಕೋವಿಡ್ -೧೯ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಸೋಂಕು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಕೆಲಸ ಮಾಡೋಣ ಈ ಮೂಲಕ ಸೋಂಕು ತಡೆಗಟ್ಟೋಣ ಎಂದಿದ್ಧಾರೆ
ರಾಜ್ಯಗಳಿಗೆ ಕೇಂದ್ರದಿಂದ ಎಲ್ಲ ರೀತಿಯ ಬೆಂಬಲ ಸಿಗಲಿದೆ ಎಂದು ಭರವಸೆ ನೀಡಿದ ಅವರು, ಎಚ್ಚರದಿಂದಿರಬೇಕು ಆದರೆ ಭಯಪಡುವ ಅಗತ್ಯವಿಲ್ಲ. ಆಸ್ಪತ್ರೆಯ ಸನ್ನದ್ಧತೆ, ಹೆಚ್ಚಿದ ಕಣ್ಗಾವಲು ಮತ್ತು ಜನರೊಂದಿಗೆ ಪರಿಣಾಮಕಾರಿ ಸಂವಹನದ ಅಣಕು ಡ್ರಿಲ್‌ಗಳೊಂದಿಗೆ ಸಿದ್ಧರಾಗಿ ಎಂದಿದ್ದಾರೆ.
ಸನ್ನದ್ಧತೆಯಲ್ಲಿ ಯಾವುದೇ ಸಡಿಲಿಕೆ ಇರಬಾರದು. ಆರೋಗ ಯಾವುದೇ ರಾಜಕೀಯದ ಕ್ಷೇತ್ರವಲ್ಲ. ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರೀತಿಯ ಬೆಂಬಲ ನೀಡಲಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡೋಣ ಎಂದು ತಿಳಿಸಿದ್ಧಾರೆ
ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲಿಸಿ ರಾಜ್ಯಗಳು ಜಾಗರೂಕರಾಗಿರಬೇಕು ಮತ್ತು ಕಣ್ಗಾವಲು ಹೆಚ್ಚಿಸುವಂತೆ ಸೂಚಿಸಿದ್ದಾರೆ.

ಕಟ್ಟೆಚ್ಚರ ವಹಿಸಿ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳನ್ನು ಒಟ್ಟುಗೂಡಿಸಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಆರೋಗ್ಯ ಸೌಲಭ್ಯಗಳು ಮತ್ತು ಸೇವೆಗಳ ಸಿದ್ಧತೆ ಮತ್ತು ಸಿದ್ಧತೆ ಪರಿಶೀಲಿಸಿ ಕೇಂದ್ರದಿಂದ ಅಗತ್ಯ ನೆರವು ಪಡೆದುಕೊಂಡು ಸೋಂಕು ತಡೆಯಲು ಪರಿಣಾಮಕಾರಿ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ, ಮನ್ಸುಖ್ ಮಾಂಡವೀಯ ಸೂಚಿಸಿದ್ದಾರೆ
ಕೇಂದ್ರೀಕರಿಸುವ ಇನ್ಫ್ಲುಯೆನ್ಸ ತರಹದ ಅನಾರೋಗ್ಯ ಮತ್ತು ತೀವ್ರತರವಾದ ಉಸಿರಾಟದ ಕಾಯಿಲೆಗಳು ಸೇರಿದಂತೆ ಉಸಿರಾಟದ ಕಾಯಿಲೆಗಳ ನಿಗಾವಹಿಸಿ ಯಾವುದೇ ಕಾರಣಕ್ಕೂ ಸೋಂಕು ಹೆಚ್ಚಳವಾಗದಂತೆ ಜಾಗರೂಕರಾಗಿ ಎಂದಿದ್ಧಾರೆ

ಬಸ್‌ನಲ್ಲಿ ಪ್ರಯಾಣಿಸುವ ಹಿರಿಯರಿಗೆ ಮಾಸ್ಕ್ ಕಡ್ಡಾಯ
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ
ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ೬೦ ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದರು.
ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಏನೆಲ್ಲಾ ಮಾರ್ಗಸೂಚಿಗಳನ್ನು ಹೊರಡಿಸುತ್ತದೆಯೋ ಅದನ್ನೆಲ್ಲಾ ಪಾಲನೆ ಮಾಡಲಾಗುವುದು. ಮುನ್ನೆಚ್ಚರಿಕೆ ಕ್ರಮವಾಗಿ ಹಿರಿಯ ನಾಗರಿಕರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಹೇಳಿದರು.
ಕೊರೊನಾ ಪರಿಸ್ಥಿತಿ ಬಗ್ಗೆ ಆರೋಗ್ಯ ಸಚಿವ ದಿನೇಶ್‌ಗೂಂಡೂರಾವ್ ಅವರ ಜತೆಯೂ ಮಾತನಾಡಿ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ರಾಜ್ಯ ರಸ್ತೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗಳಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರ ಜತೆಪ್ರತಿಯೊಬ್ಬರು ಮಾಸ್ಕ್ ಧರಿಸಿ ಪ್ರಯಾಣಿಸಿದರೆ ಒಳ್ಳೆಯದು ಈ ಬಗ್ಗೆ ಪ್ರಯಾಣಿಕರಲ್ಲಿ ಮನವಿ ಮಾಡುತ್ತೇನೆ ಎಂದರು.
ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಕೇರಳಗೆ ಹೋಗಿ ಬರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸ್ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.
ಕೊರೊನಾ ನಿಯಂತ್ರಣಕ್ಕೆ ಏನೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೋ ಅದನ್ನು ಸರ್ಕಾರ ಕೈಗೊಳ್ಳುತ್ತದೆ. ಸಾರಿಗೆ ಸಂಸ್ಥೆಯ ಬಸ್‌ಗಳನ್ನು ಸಹ ಸಾನಿಟೈಸ್ ಮಾಡಿ ಮುನ್ನೆಚ್ಚರಿಕೆ ವಹಿಸುತ್ತೇವೆ ಎಂದು ಅವರು ಹೇಳಿದರು.