ಹೊಸ ವರ್ಷಾಚರಣೆ, ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ಜಪ್ತಿಗೆ ಕ್ರಮ

ಬಾಗಲಕೋಟೆ:ಡಿ 31 : ವರ್ಷಾಚರಣೆ ಸಂದರ್ಭದಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ವಾಹನ ಜಪ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾದ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾದ್ಯಮದವರಿಗೆ ಈ ವಿಷಯ ತಿಳಿಸಿದ ಅವರು ಗ್ರಾ.ಪಂ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸುತ್ತಿರುವ ಹಿನ್ನಲೆಯಲ್ಲಿ ಡಿಸೆಂಬರ 31 ರಂದು ರಾತ್ರಿ 12 ಗಂಟೆ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿತ್ತು, ಆದರೆ ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಅದನ್ನು ಬದಲಾಯಿಸಿ ಡಿಸೆಂಬರ 30ರ ರಾತ್ರಿ 12 ವರೆಗೆ ಮಾತ್ರ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸುವದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದು, ಅದನ್ನು ತಡೆಯಲು ಡ್ರಿಂಕ್ & ಡ್ರೈವ್ ಮಾಡಿದಲ್ಲಿ ವಾಹನ ಜಪ್ತ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿದ ಅವರು ಜಿಲ್ಲೆಯ ಐತಿಹಾಸಿಕ ಸ್ಥಳಗಳು ಸಹ ಸಾರ್ವಜನಿಕ ಸ್ಥಳಗಳಾಗಿರುವದರಿಂದ ಹೊಸ ವರ್ಷಾಚರಣೆಗೆ ಅವಕಾಶವಿರುವದಿಲ್ಲ. ಹೊಟೇಲ, ಬಾರ್ ಮತ್ತು ರೆಸ್ಟೋರೆಂಟಗಳು ನಿಯಮಾವಳಿಗಳಂತೆ ಎಂದಿನಂತೆ ನಡೆಯಲಿದ್ದು, ಹೊಸದಾಗಿ ಯಾವುದೇ ರೀತಿಯ ಪಾರ್ಟಿಗಳಿಗೆ ಅವಕಾಶವಿರುವದಿಲ್ಲವೆಂದು ತಿಳಿಸಿದರು.