ಹೊಸ ವರ್ಷಾಚರಣೆ ವೇಳೆ ಎಚ್ಚರಿಕೆ ವಹಿಸಿ: ಎಲ್ಲ ರಾಜ್ಯಗಳಿಗೆ ಕೇಂದ್ರದ ಪತ್ರ

ನವದೆಹಲಿ, ಡಿ 30- ನಾಳೆ ನೂತನ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅತ್ಯಂತ ಜಾಗರೂಕರಾಗಿರುವಂತೆ ಕೇಂದ್ರ ಆರೋಗ್ಯ ಇಲಾಖೆ ಎಲ್ಲ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದೆ.
ದೇಶದಲ್ಲಿ ಬ್ರಿಟನ್ ರೂಪಾಂತರ ವೈರಾಣು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾ ಸಂಭ್ರಮಾಚರಣೆ ವೇಳೆ ಎಚ್ಚರ ವಹಿಸುವಂತೆ ಸೂಚಿಸಿದೆ.
ಹೊಸದಾಗಿ ಕಾಣಿಸಿಕೊಂಡಿರುವ ಸೋಂಕನ್ನು ಸೂಪರ್ ಸ್ಪೈಡರ್ ಎಂದು ಹೇಳಲಾಗುತ್ತಿದೆ. ಚಳಿಗಾಲದಲ್ಲಿ ಇದರ ತೀವ್ರತೆಯನ್ನು ಕಡಿಮೆ ಮಾಡಲು ಜನಸಂದಣಿಯನ್ನು ನಿಗ್ರಹಿಸಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಖುವಂತೆ ಕೇಂದ್ರ ಆರೋಗ್ಯಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲ ರಾಜ್ಯಗಳಿಗೂ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಕಳೆದ ಮೂರು ತಿಂಗಳಿಂದ ದೇಶಾದ್ಯಂತ ಸಕ್ರಿಯ‌ ಕೊರೊನಾ ಪ್ರಕರಣಗಳು ಇಳಿಕೆಯಾಗಿವೆ ಎಂದು ಅವರು ತಿಳಿಸಿದ್ದಾರೆ.