ಹೊಸ ಶಿಕ್ಷಣ ನೀತಿಯಲ್ಲಿ ಮೌಲ್ಯಾಧಾರಿತ ಶಿಕ್ಷಣ :ವಿನೋದ್ ಕರುವರಕುಂಡು

ವಿಜಯಪುರ, ಜು.14-ಮಹಿಳಾ ವಿವಿಯ ವಿದ್ಯಾರ್ಥಿನಿಯರು ಅರ್ಥಪೂರ್ಣ ಜೀವನ ನಡೆಸಲು ಹೊಸ ಶಿಕ್ಷಣ ನೀತಿಯಲ್ಲಿ ತಿಳಿಸಿರುವ ಎಲ್ಲಕೌಶಲ್ಯ ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯುವುದು ಅನಿವಾರ್ಯ ಎಂದು ಭಾರತ ಸರಕಾರದ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಶಿಕ್ಷಣ ನಿರ್ವಹಣಾ ಸಮಿತಿಯ ಸದಸ್ಯ ವಿನೋದ್‍ಕರುವರ ಕುಂಡು ಹೇಳಿದರು.
ಅವರ ುಇಲ್ಲಿಂiÀ ುಕರ್ನಾಟಕ ರಾಜ್ಯಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಶಿಕ್ಷಾ ಸಂಸ್ಕøತಿ ಉತ್ಥಾನ ನ್ಯಾಸ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಹೊಸ ಶಿಕ್ಷಣ ನೀತಿ-2020ರ ಅನುಷ್ಠಾನ: ಅದರ ಸವಾಲುಗಳು ಮತ್ತು ಪರಿಹಾರಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೊಸ ಶಿಕ್ಷಣ ನೀತಿಯಲ್ಲಿ ವಿಚಾರಗಳನ್ನು ಬಳಸಿಕೊಂಡ ಈ ಮಹಿಳಾ ವಿಶ್ವವಿದ್ಯಾನಿಲಯವು ಪ್ರಾಚೀನಕಾಲದ ವಿಶ್ವವಿದ್ಯಾಲಯಗಳಾದಂತಹ ನಳಂದಾ ಮತ್ತು ತಕ್ಷಶಿಲಾದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ ಎಂದುಅವರು ಆಶಿಸಿದರು.
ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಿದ್ದ ಭಾರತ ಶಿಕ್ಷಣ ಮಂಡಳಿಯ ಜಂಟಿ ಕಾರ್ಯದರ್ಶಿ ಮತ್ತುಮಹಿಳಾ ವಿವಿಯ ವಿಶ್ರಾಂತ ಕುಲಪತಿ ಪ್ರೊ.ಮೀನಾ.ಆರ್.ಚಂದಾವರಕರ್ ಮಾತನಾಡಿ, ಹೊಸ ಶಿಕ್ಷಣ ನೀತಿಯ ಪ್ರಕಾರ ವಿದ್ಯಾರ್ಥಿನಿಯರುಭಾರತೀಯತೆಯ ವಿಚಾರಗಳ ಕೇಂದ್ರಿಕೃತ ಶಿಕ್ಷಣದೊಂದಿಗೆ ಸಂಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ವಿದ್ಯಾರ್ಥಿನಿಯರು ತಾವು ಆಸಕ್ತಿಹೊಂದಿದ ವಿಷಯ ದೊಂದಿಗೆ ಮುಕ್ತ ಶಿಕ್ಷಣವನ್ನು ಪಡೆಯಲು ಹೊಸ ಶಿಕ್ಷಣ ನೀತಿ ಅವಕಾಶ ನೀಡಿದ್ದು ಅದು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಜ್ಞಾನ ಆಧಾರಿತ, ತಂತ್ರಜ್ಞಾನ ಆಧಾರಿತ ಶಿಕ್ಷಣದೊಂದಿಗೆ ಹೊಸ ಶಿಕ್ಷಣ ನೀತಿಯ ಧ್ಯೇಯ ಉದ್ದೇಶಗಳನ್ನು ಸಾಧಿಸಲು ಪ್ರತಿಯೊಬ್ಬರು ಮಾನಸಿಕ ಸ್ಥಿತಿ ಬದಲಾವಣೆ ಮಾಡಿಕೊಳ್ಳುವುದರ ಮೂಲಕ ಹೊಸ ನೀತಿಯನ್ನುಧನಾತ್ಮಕವಾಗಿ ಒಪ್ಪಿಕೊಳ್ಳಬೇಕೆಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರುಉಪಸ್ಥಿತರಿದ್ದರು.ಕಾರ್ಯಕ್ರಮ ಸಂಯೋಜಕ ಪ್ರೊ.ರಾಜಕುಮಾರ ಮಾಲಿಪಾಟೀಲ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕನುಡಿಗಳನ್ನಾಡಿದರು.ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕಿಡಾ.ಭಾರತಿಗಾಣಿಗೇರಕಾರ್ಯಕ್ರಮವನ್ನು ನಿರೂಪಿಸಿದರು.