ಹೊಸ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಜ್ಞಾನ ವೃದ್ಧಿಸಲು ಸಹಕಾರಿ:ವಿ ಡಿ ಮೈತ್ರಿ

ಕಲಬುರಗಿ;ಮೇ.25: ಹೊಸ ಶಿಕ್ಷಣ ನೀತಿಯು, ವಿಶೇಷವಾಗಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ತುಂಬಾ ಸಹಕಾರಿಯಾಗಿದೆ. ಇದು ವಿದ್ಯಾರ್ಥಿಗಳು ತೆಗೆದುಕೊಂಡಿರುವ ಮುಖ್ಯ ವಿಷಯದ ಹೊರತಾಗಿಯೂ ಹೊರಗಿನ ವಿಷಯಗಳನ್ನು ಅಧ್ಯಯನ ಮಾಡುವ ಸ್ವಾತಂತ್ರ್ಯವನ್ನು ನೀಡಿದೆ ಹಾಗೂ ವಿದ್ಯಾರ್ಥಿಗಳ ಜ್ಞಾನದ ಮೂಲವನ್ನು ವಿಸ್ತರಿಸಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಸಮಕುಲಪತಿ ಪೆÇ್ರ.ವಿ.ಡಿ.ಮೈತ್ರಿ ಹೇಳಿದರು.

ಶರಣಬಸವ ವಿಶ್ವವಿದ್ಯಾಲಯದ ಲಲಿತಕಲಾ ವಿಭಾಗದಲ್ಲಿ ಬುಧವಾರದಂದು ಏರ್ಪಡಿಸಿದ್ದ ಎರಡು ದಿನಗಳ ಅಂತರಾಷ್ಟ್ರೀಯ ಕಲಾವಿದರ ಶಿಬಿರ ಮತ್ತು ಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೊಸ ಶಿಕ್ಷಣ ನೀತಿಯಿಂದಾಗಿ ಪ್ರತಿ ಕೋರ್ಸ್‍ಗೆ ಮುಕ್ತ ಆಯ್ಕೆಗಳು ಇರಬೇಕು ಮತ್ತು ವಿದ್ಯಾರ್ಥಿಯ ಹಿತಾಸಕ್ತಿಗಳ ಅನುಸಾರವಾಗಿ ತಮ್ಮ ಮುಖ್ಯ ವಾಹಿನಿಯನ್ನು ಹೊರತುಪಡಿಸಿ ಬೇರೆ ವಿಷಯಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಹೊಂದಿರಬೇಕೆಂದು ತಿಳಿಸಿದರು.

ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಲಲಿತಕಲೆ, ಭಾಷೆಗಳು ಮತ್ತು ಇತರ ವಿಷಯಗಳನ್ನು ಆಯ್ಕೆ ಮಾಡಲು ಅವಕಾಶವನ್ನು ಒದಗಿಸುವ ಈ ನಿಬಂಧನೆಯು ಕಲಾ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ವಿಷಯವನ್ನು ಐಚ್ಛಿಕವಾಗಿ ಅಧ್ಯಯನ ಮಾಡಲು ಅವಕಾಶ ಮಾಡಿಕೊಟ್ಟಿದೆ. ಇದು ಇತರ ವಿಷಯಗಳಲ್ಲಿ ವಿದ್ಯಾರ್ಥಿಯ ಜ್ಞಾನವನ್ನು ವೃದ್ಧಿಸುವುದಲ್ಲದೆ, ಅವರ ಮುಖ್ಯ ಶಿಕ್ಷಣದ ಹೊರತಾಗಿ ಇತರ ವಿಷಯಗಳಲ್ಲಿ ಅವರ ಕೌಶಲ್ಯಗಳನ್ನು ಸುಧಾರಿಸುವ ಮೂಲಕ ವಿದ್ಯಾರ್ಥಿಗಳ ಉದ್ಯೋಗಶೀಲತೆಯನ್ನು ಸುಧಾರಿಸುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಶರಣಬಸವ ವಿಶ್ವವಿದ್ಯಾಲಯದ ಸಮಕುಲಪತಿ ಪೆÇ್ರ. ವಿ ಡಿ ಮೈತ್ರಿ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಪೆÇ್ರ.ಕಿರಣ ಮಾಕಾ, ಲಲಿತಕಲಾ ವಿಭಾಗದ ಮುಖ್ಯಸ್ಥ ಡಾ. ಸುಬ್ಬಯ್ಯ ನೀಲಾ ಹಾಗೂ ಇನ್ನಿತರರು ಲಲಿತಕಲಾ ವಿಭಾಗದ ವಿದ್ಯಾರ್ಥಿಗಳು ಮತ್ತು ಲಲಿತಕಲೆಯನ್ನು ಐಚ್ಛಿಕ ವಿಷಯವಾಗಿ ಆಯ್ಕೆ ಮಾಡಿಕೊಂಡಿದ್ದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಚಿತ್ರಿಸಿದ ಭಾವಚಿತ್ರಗಳು, ಭೂದೃಶ್ಯಗಳು ಮತ್ತು ಇತರ ವರ್ಣಚಿತ್ರಗಳ ಪ್ರದರ್ಶನವನ್ನು ವೀಕ್ಷಿಸಿದರು.

ಇದೇ ಸಂಧರ್ಭದಲ್ಲಿ ಮಾತನಾಡಿದ ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ.ಲಕ್ಷ್ಮೀ ಪಾಟೀಲ ಮಾಕಾ ಅವರು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಕಾರ್ಯವೈಖರಿ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಶರಣಬಸವ ವಿಶ್ವವಿದ್ಯಾಲಯದಲ್ಲಿ ಐಚ್ಛಿಕ ಪದವೀಧರರನ್ನು ಪರಿಚಯಿಸಿರುವುದು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ವಿಜ್ಞಾನ ವಿಭಾಗದ ಮುಖ್ಯಸ್ಥ ಪೆÇ್ರ. ನಾಗಬಸವಣ್ಣ ಗುರಗೋಳ ಮಾತನಾಡಿದರು. ಡಾ. ಸುಬ್ಬಯ್ಯ ನೀಲಾ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಹಾಗೂ ದೇಶದ ವಿವಿಧೆಡೆಯಿಂದ ಆಗಮಿಸಿದ್ದ 18ಕ್ಕೂ ಹೆಚ್ಚು ಹಿರಿಯ ಕಲಾವಿದರು, ಭೌತಶಾಸ್ತ್ರ ಮತ್ತು ಗಣಿತ ವಿಭಾಗದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.