ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ಪ್ರಕಟವಾಗುತ್ತಿರುವ “ಟಿವಿ ಠೀವಿ” ಮಾಸ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆಯಾಗಿದ್ದು ಟಿವಿ ಅಸೋಸಿಯೇಷನ್ ಹೊಸ ಹೆಜ್ಜೆ ಇಟ್ಟಿದೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ, ನಟಿ ಉಮಾಶ್ರೀ, ನಟ ಪ್ರಕಾಶ್ ರೈ, ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಮಿಲನ ಪ್ರಕಾಶ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಟಿ ವಿ ಅಸೋಸಿಯೇಷನ್ ಅಧ್ಯಕ್ಷ ರವಿ ಗರಣಿ ಮಾತನಾಡಿ ಕಿರುತೆರೆ ಕ್ಷೇತ್ರದಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನ ಕೆಲಸ ಮಾಡುತ್ತಾರೆ. ಸುಮಾರು ಇಪ್ತತ್ತು ಸಾವಿರಕ್ಕೂ ಹೆಚ್ಚು ಜನ ಉದ್ಯಮ ನಂಬಿದ್ದಾರೆ.ಯಶಸ್ವಿನಿ ಸೇರಿದಂತೆ ಯವುದೇ ಸರ್ಕಾರದ ಯೋಜನೆಗಳು ಸಿಗುತ್ತಿಲ್ಲ. ಕೆಲವು ವರ್ಷಗಳು ಪ್ರಸಾರವಾಗಿ ಸ್ಥಗಿತಗೊಂಡಿದ್ದ “ಟಿವಿ ಠೀವಿ” ಮಾಸಪತ್ರಿಕೆ ಪುನರಾರಂಭ ಮಾಡುತ್ತಿದ್ದೇವೆ. ಮಾಸ ಪತ್ರಿಕೆ ಎಲ್ಲೂ ಮಾರಾಟಕ್ಕಿರುವುದಿಲ್ಲ ಸದಸ್ಯರಿಗೆ ಹಾಗೂ ಆಸಕ್ತರಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಎಂದರು.
ಪ್ರಧಾನ ಕಾರ್ಯದರ್ಶಿ ಸೃಜನ್ ಲೋಕೇಶ್ ಮಾತನಾಡಿ,ಮುಂದಿನ ವರ್ಷ ನಮ್ಮ ಸಂಸ್ಥೆ 25 ನೇ ವರ್ಷಕ್ಕೆ ಅಡಿಯಿಡುತ್ತಿದೆ ಈಗಿರುವ ಸಂಸ್ಥೆಯ ಸದಸ್ಯರು ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗಿಯಾಗಬೇಕು ಹಾಗೂ ಇನ್ನೂ ಸದಸ್ಯರಾಗದವರೂ ಬೇಗ ಸದಸ್ಯತ್ವ ಪಡೆದುಕೊಳ್ಳುವಂತೆ ಹೇಳಿದರು. ಟಿ ವಿ ಅಸೋಸಿಯೇಷನ್ ಉಪಾಧ್ಯಕ್ಷ ಗಣೇಶ್ ರಾವ್ ಕೇಸರ್‍ಕರ್ ಸೇರಿದಂತೆ ಕಿರುತೆರೆಯ ಸಂಘದ ಪದಾಧಿಕಾರಿಗಳಿದ್ದರು.
ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾತನಾಡಿ “ಟಿವಿ ಅಸೋಸಿಯೇಷನ್ ಅಧ್ಯಕ್ಷ ರವಿ ಆರ್ ಗರಣಿ, ಅವರು ಪ್ರಸ್ತಾಪಿಸಿದ ವಿಷಯಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಸಂಘದ ಪದಾಧಿಕಾರಿಗಳು ಭೇಟಿ ಮಾಡಲು ವ್ಯವಸ್ಥೆ ಮಾಡುತ್ತೇನೆ ಎಂದರು.